ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ತಿಳಿಸಿದರು.
ಮಾರ್ಚ್ 3ರಂದು ಬೆಳಿಗ್ಗೆ 10ಕ್ಕೆ ನಡೆಯುವ 104ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದರು.
ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.