ADVERTISEMENT

ನಂಜನಗೂಡು: ಜಲಜೀವನ್ ಮಿಷನ್ ನೀರಿನ ಪೈಪ್‌ಗಳಿಗೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 30 ಮೇ 2024, 14:30 IST
Last Updated 30 ಮೇ 2024, 14:30 IST
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಜಲಜೀವನ್ ಮಿಷನ್  ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಂಗ್ರಹಿಸಿ ಇಡಲಾಗಿದ್ದ ಪೈಪ್‌ ಬಂಟಲ್‌ಗಳ ರಾಶಿ  ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿರುವುದು.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಜಲಜೀವನ್ ಮಿಷನ್  ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಂಗ್ರಹಿಸಿ ಇಡಲಾಗಿದ್ದ ಪೈಪ್‌ ಬಂಟಲ್‌ಗಳ ರಾಶಿ  ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿರುವುದು.   

ನಂಜನಗೂಡು: ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಕೇಂದ್ರ ಸರ್ಕಾರ ಪ್ರಾಯೋಜಿತ ಜಲಜೀವನ್ ಮಿಷನ್‌ನ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಂಗ್ರಹಿಸಿ ಇಡಲಾಗಿದ್ದ ಪೈಪ್‍ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ  ಪೈಪ್‌ಗಳು ಸುಟ್ಟು ಭಸ್ಮವಾದವು.

ಗ್ರಾಮದ ಜೆಎಸ್‍ಎಸ್ ಕಾಲೇಜಿನ ಹಿಂಭಾಗದ ಟೀಚರ್ ಕಾಲೊನಿ ಬಳಿ ಪೈಪ್‍ಗಳನ್ನು ಪೇರಿಸಿ ಇಡಲಾಗಿತ್ತು.   ಮಧ್ಯಾಹ್ನ  ಬೆಂಕಿ ತಗುಲಿ, ಬೆಂಕಿಯ ಕೆನ್ನಾಲಿಗೆಗೆ ಪೈಪ್‍ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ.   ₹10 ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ.

ಬೆಂಕಿಯ ಜ್ವಾಲೆಗೆ ಅಕ್ಕಪಕ್ಕದ ಮನೆಯ ನಿವಾಸಿಗಳು ಕೆಲಕಾಲ ಆತಂಕಕ್ಕೆ ಒಳಗಾದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ADVERTISEMENT

 ಡಿವೈಎಸ್ಪಿ ರಘು, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸೈ ಚೇತನ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.