ಮೈಸೂರು: ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಆಗ್ರಹಿಸಿ, ವಿಶ್ವ ರೈತ ದಿನವಾದ ಡಿ.23ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ರೈತರ ಮಹಾಅಧಿವೇಶನ ನಡೆಸಲಾಗುವುದು’ ಎಂದು ಸಂಯುಕ್ತ ಕಿಸಾನ್ ಮೋರ್ಚಾ ದಕ್ಷಿಣ ಭಾರತ ಸಂಚಾಲಕ ಕುರುಬೂರು ಶಾಂತಕುಮಾರ್ ಹೇಳಿದರು.
‘ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರ ಸಮ್ಮುಖದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಂಭೀರ ಎಚ್ಚರಿಕೆ ನೀಡಲಾಗುವುದು’ ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
‘ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ, ಪ್ರವಾಹದಿಂದ ಹಾನಿ ಅನುಭವಿಸಿರುವ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬೆಳೆ ನಾಶವಾದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ನೆರವಿಗೆ ಸರ್ಕಾರ ಬರಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.