ADVERTISEMENT

ಮೈಸೂರು|ಪ್ರತಿ ಮನೆಗೂ ಆರೋಗ್ಯ ಸೇವೆ: ಗಾಯತ್ರಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2023, 7:21 IST
Last Updated 5 ಫೆಬ್ರುವರಿ 2023, 7:21 IST

ಮೈಸೂರು: ‘ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆಯನ್ನು ಪ್ರತಿ ಮನೆ ಬಾಗಿಲಿಗೂ ತಲುಪಿಸುವ ನಿಟ್ಟಿನಲ್ಲಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಜಾರಿಗೊಳಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ತಿಳಿಸಿದರು.

ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ ಅನಿಮಿಯಾ ಮುಕ್ತ ಗ್ರಾಮ ಪಂಚಾಯತಿ ಹಾಗೂ ಮುಟ್ಟಿನ ನೈರ್ಮಲ್ಯ, ಅಸಾಂಕ್ರಮಿಕ ರೋಗಗಳ ತಪಾಸಣೆ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇತರ ಇಲಾಖೆಗಳ ಸಹಕಾರದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು’ ಎಂದರು.

ADVERTISEMENT

ಉಪ ಕಾರ್ಯದರ್ಶಿ ಕೃಷ್ಣರಾಜು ಮಾತನಾಡಿದರು.

ಟಿಎಚ್‌ಒಗಳು, ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.