ನಂಜನಗೂಡು: ರೈತರಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ತಾಲ್ಲೂಕಿನ ಸುತ್ತೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮಂತ್ರಾಲಯದ ಪ್ರಾದೇಶಿಕ ಸಾವಯವ ಹಾಗೂ ನೈಸರ್ಗಿಕ ಕೇಂದ್ರದ ಸಹಯೋಗದೊಂದಿಗೆ ನ.15ರಿಂದ ಡಿ.5ರವರೆಗೆ ಸಾವಯವ ಕೃಷಿ ತರಬೇತಿ ಹಮ್ಮಿಕೊಳ್ಳಲಾಗಿದೆ.
ಸ್ಥಳೀಯವಾಗಿ ದೊರಕುವ ಕೊಟ್ಟಿಗೆ ಗೊಬ್ಬರ, ಎರೆಗೊಬ್ಬರ ಮುಂತಾದವುಗಳನ್ನು ಬಳಸಿ ಸಾವಯವ ಕೃಷಿ ಮಾಡಬಹುದಾಗಿದ್ದು, ಹಂತ ಹಂತವಾಗಿ ರಾಸಾಯನಿಕ ಗೊಬ್ಬರದ ಅವಲಂಬನೆ ಕಡಿಮೆ ಮಾಡಿ ಪರಿಸರ, ಮನುಷ್ಯ ಹಾಗೂ ಜಾನುವಾರು ಆರೋಗ್ಯವನ್ನು ಸುಧಾರಣೆ ಸಾವಯವ ಕೃಷಿಯಿಂದ ಸಾಧ್ಯ. ಈ ನಿಟ್ಟಿನಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವ ರೈತರಿಗೆ ವಸತಿ ಸೌಕರ್ಯ ಕಲ್ಪಿಸಲಾಗುವುದು. ರೈತ ಉತ್ಪಾದಕ ಸಂಘಗಳ ಸದಸ್ಯರು ಹಾಗೂ ಯುವ ರೈತರು ಪಾಲ್ಗೊಳ್ಳಲಿದ್ದಾರೆ. ಮಾಹಿತಿಗೆ ಜೆಎಸ್‍ಎಸ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಅವರ ಮೊಬೈಲ್ ಸಂಖ್ಯೆ 9380199128ಕ್ಕೆ ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.