ADVERTISEMENT

‘ಪಂಚಮಿತ್ರ’ ಪೋರ್ಟಲ್ ಅನಾವರಣ: ಹಲವು ಸೇವೆ ಒಂದೇ ಕಡೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 13:48 IST
Last Updated 3 ಮಾರ್ಚ್ 2024, 13:48 IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ‘ಪಂಚಮಿತ್ರ’ ಪೋರ್ಟಲ್‌ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಭಾನುವಾರ ಅನಾವರಣಗೊಳಿಸಿದರು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ‘ಪಂಚಮಿತ್ರ’ ಪೋರ್ಟಲ್‌ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಭಾನುವಾರ ಅನಾವರಣಗೊಳಿಸಿದರು   

ಮೈಸೂರು: ಗ್ರಾಮ ಪಂಚಾಯಿತಿಗಳಲ್ಲಿ ಹಲವು ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ‘ಪಂಚಮಿತ್ರ’ ಪೋರ್ಟಲ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಇಲ್ಲಿ ಭಾನುವಾರ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಸಚಿವರು, ‘ಸಾರ್ವಜನಿಕರು ಅವಶ್ಯವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಈ ಪೋರ್ಟಲ್‌ ಸಹಕಾರಿಯಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ‘ಪಂಚಮಿತ್ರ’ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.