ADVERTISEMENT

ಸನಾತನ ಧರ್ಮ ಕೊರೊನಾ, ಡೆಂಗಿಗೆ ಸಮ ಎಂದ ಉದಯ ನಿಧಿ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2023, 9:34 IST
Last Updated 4 ಸೆಪ್ಟೆಂಬರ್ 2023, 9:34 IST
ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀ
ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀ   

ಮೈಸೂರು: ಸನಾತನ ಧರ್ಮವು ಕೊರೊನಾ, ಡೆಂಗಿ, ಮಲೇರಿಯಾಕ್ಕೆ ಸಮಾನವಾದುದು, ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು' ಎಂಬ ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಖಂಡಿಸಿದ್ದಾರೆ.

ಇಲ್ಲಿ ಚಾತುರ್ಮಾಸ್ಯದಲ್ಲಿರುವ ಶ್ರೀಗಳು ಹೇಳಿಕೆ ನೀಡಿದ್ದು, 'ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಸಮಾಜದಲ್ಲಿ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಸನಾತನ' ಎಂದರೇ ಸದಾ ಕಾಲವೂ ಇರುವಂಥದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು ಎನ್ನುತ್ತದೆ ಸನಾತನ ಧರ್ಮ. ಅಂತಹ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಮನೋಪ್ರವೃತ್ತಿ ಸರಿಯಲ್ಲ. ಅದನ್ನು ಖಂಡಿಸುತ್ತೇವೆ' ಎಂದು ಶ್ರೀಗಳು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.