ADVERTISEMENT

ಅಂಚೆ ಇಲಾಖೆ ಪ್ರಗತಿಗೆ ಶ್ರಮಿಸಿ: ಏಂಜಲ್ ರಾಜ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 6:25 IST
Last Updated 24 ಜೂನ್ 2024, 6:25 IST
ಅಂಚೆ ಇಲಾಖೆಯ ಸಿಬ್ಬಂದಿ ಕುಟುಂಬದ ಮಕ್ಕಳಿಗೆ ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಏಂಜಲ್ ರಾಜ್ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿ.ಎಲ್. ನವೀನ್, ಚೇತನ್ ಉತ್ತಪ್ಪ ಜೊತೆಗಿದ್ದರು
ಅಂಚೆ ಇಲಾಖೆಯ ಸಿಬ್ಬಂದಿ ಕುಟುಂಬದ ಮಕ್ಕಳಿಗೆ ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಏಂಜಲ್ ರಾಜ್ ಪ್ರತಿಭಾ ಪುರಸ್ಕಾರ ವಿತರಿಸಿದರು. ವಿ.ಎಲ್. ನವೀನ್, ಚೇತನ್ ಉತ್ತಪ್ಪ ಜೊತೆಗಿದ್ದರು   

ಮೈಸೂರು: ಅಂಚೆ ಇಲಾಖೆಯ ಪ್ರಗತಿಗಾಗಿ ಸಿಬ್ಬಂದಿ ಮತ್ತಷ್ಟು ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಏಂಜಲ್ ರಾಜ್ ಹೇಳಿದರು.

ಅಂಚೆ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, 2023-24ನೇ ಸಾಲಿನಲ್ಲಿ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಖಾತೆಗಳನ್ನು ತೆರೆದು ಸಾಧನೆ ಮಾಡಿದ ಮೈಸೂರು ಅಂಚೆ ವಿಭಾಗದ ಸಿಬ್ಬಂದಿಗೆ ಬಹುಮಾನ ವಿತರಣೆ ಮತ್ತು ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು.

ಅಂಚೆ ಇಲಾಖೆಯ ಸಿಬ್ಬಂದಿ ಪ್ರಾಮಾಣಿಕತೆ ಮತ್ತು ಶ್ರಮ ವಹಿಸಿ ಕೆಲಸ ಮಾಡುವುದರಲ್ಲಿ ಬೇರೆ ಇಲಾಖೆಗಳಿಗೆ ಹೋಲಿಸಿದರೆ ಮಂಚೂಣಿಯಲ್ಲಿದ್ದಾರೆ. ನೂತನ ತಂತ್ರಜ್ಞಾನವನ್ನು ಮೈಗೂಡಿಸಿಕೊಂಡು ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಪ್ರಭಾರ ಅಂಚೆ ಉಪ ಅಧೀಕ್ಷಕ ವಿ.ಎಲ್. ನವೀನ್, ಸಹಾಯ ಅಂಚೆ ಅಧೀಕ್ಷಕ ಚೇತನ್ ಉತ್ತಪ್ಪ, ಪಿಆರ್‌ಐಪಿ ರಂಗಸ್ವಾಮಿ, ಮೈಸೂರು ಅಂಚೆ ವಿಭಾಗದ ಮಾರುಕಟ್ಟೆ ಅಧಿಕಾರಿ ಸುರೇಶ್ ಕುಮಾರ್ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.