ಮೈಸೂರು: ‘ಜೆಡಿಎಸ್–ಬಿಜೆಪಿ ಮೈತ್ರಿಗೆ ನಮ್ಮ ಸಹಮತವಿದೆ’ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.
ಇಲ್ಲಿ ಶುಕ್ರವಾರ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ‘ಬಿ.ಎಸ್. ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕರು. ಏಕಾಂಗಿಯಾಗಿ ರಾಜ್ಯ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೈತ್ರಿ ಬಗ್ಗೆ ಅವರೇ ಹೇಳಿಕೆ ನೀಡಿದ್ದಾರೆಂದರೆ ಅದಕ್ಕೆ ನಮ್ಮ ಸಹಮತವಿದೆ’ ಎಂದರು.
‘ರಾಜ್ಯದಲ್ಲಿ ಎರಡು ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವರು ಯಡಿಯೂರಪ್ಪ. ಕೇಂದ್ರದ ನಾಯಕರೊಂದಿಗೆ ಸಮಾಲೋಚಿಸಿ ಈ ನಿರ್ಧಾರಕ್ಕೆ ಬಂದಿರುತ್ತಾರೆ. ಪಕ್ಷದ ಹಿತದೃಷ್ಟಿಯಿಂದಲೇ ತೀರ್ಮಾನ ಕೈಗೊಂಡಿರುತ್ತಾರೆ’ ಎಂದು ಹೇಳಿದರು.
‘ರಾಜ್ಯದ ಜನ ಪ್ರಜ್ಞಾವಂತರು. ಕೆಲವೊಮ್ಮೆ ಯಾಮಾರುತ್ತಾರೆ. ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಯಾಮಾರಿದರು. ಆದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಜನರಿಗೆ ಈಗ ತಪ್ಪಿನ ಅರಿವಾಗಿದ್ದು, ಲೋಕಸಭಾ ಚನಾವಣೆಯಲ್ಲಿ ಬಿಜೆಪಿಗೆ ಮತ ನೀಡುತ್ತಾರೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಓದಿ... ಸಂಘರ್ಷವೇ ಆಗಲಿ, ಮಹಿಷ ದಸರೆಗೆ ಅವಕಾಶ ಕೊಡುವುದಿಲ್ಲ: ಸಂಸದ ಪ್ರತಾಪ ಸಿಂಹ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.