‘ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದಲ್ಲಿ ವಸ್ತ್ರಸಂಹಿತೆ ಇಲ್ಲವೆಂದು ಸರ್ಕಾರ ಹೇಳಿದಾಗ ಯಾರೂ ಪ್ರಶ್ನಿಸಲಿಲ್ಲವೇಕೆ? ಹೇಗೆ ಬೇಕಾದರೂ ಬಟ್ಟೆ ಧರಿಸಿಕೊಂಡು ದೇವಸ್ಥಾನಕ್ಕೆ ಬರುವುದಾದರೆ ಧಾರ್ಮಿಕ ಸ್ವಾತಂತ್ರ್ಯ ಉಳಿಯುವುದಾದರೂ ಹೇಗೆ’ ಎಂದು ಚಿಂತಕ ಹಿರೇಮಗಳೂರು ಕಣ್ಣನ್ ಕೇಳಿದರು. ಮೈಸೂರಿನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಸಂಸ್ಕೃತಿ ಮತ್ತು ಜನರ ಸಂಸ್ಕಾರದ ಉಳಿವಿಗೆ ದೇವಸ್ಥಾನದ ಅರ್ಚಕ ವೃತ್ತಿಯನ್ನು ಪುರುಷರಿಗೆ ಮಾತ್ರವೇ ಮೀಸಲಿಡಬೇಕು. ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರಗಳೂ ಸೂಕ್ತವಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.