ADVERTISEMENT

ಶುಲ್ಕ ಪಾವತಿಗೆ ಒತ್ತಡ ಸಲ್ಲದು: ಎಸ್‌ಎಫ್‌ಐ

​ಪ್ರಜಾವಾಣಿ ವಾರ್ತೆ
Published 24 ಮೇ 2023, 5:13 IST
Last Updated 24 ಮೇ 2023, 5:13 IST
ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ದಾಖಲಾತಿ ವೇಳೆ ಕಾಲೇಜು ಶುಲ್ಕಕ್ಕಾಗಿ ಒತ್ತಡ ಹಾಕದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಮುಂಭಾಗ ಮಂಗಳವಾರ ಪ್ರತಿಭಟಿಸಿದರು – ಪ್ರಜಾವಾಣಿ ಚಿತ್ರ
ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ದಾಖಲಾತಿ ವೇಳೆ ಕಾಲೇಜು ಶುಲ್ಕಕ್ಕಾಗಿ ಒತ್ತಡ ಹಾಕದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಮುಂಭಾಗ ಮಂಗಳವಾರ ಪ್ರತಿಭಟಿಸಿದರು – ಪ್ರಜಾವಾಣಿ ಚಿತ್ರ   

ಮೈಸೂರು: ‘ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ದಾಖಲಾತಿ ಸಮಯದಲ್ಲಿ ಶುಲ್ಕ ಪಾವತಿಸುವಂತೆ ಒತ್ತಡ ಹಾಕಬಾರದು’ ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟಿಸಿದರು.

ಫೆಡರೇಷನ್‌ ಜಿಲ್ಲಾಧ್ಯಕ್ಷ ವಿಜಯ್‌ ಕುಮಾರ್‌ ಮಾತನಾಡಿ, ‘ವಿದ್ಯಾರ್ಥಿ ವೇತನ ಬಂದ ಬಳಿಕ 7 ದಿನಗಳೊಳಗೆ ಶುಲ್ಕ ಪಾವತಿ ಮಾಡಬೇಕು ಎಂದು ಸರ್ಕಾರದ ಆದೇಶವಿದೆ. ಆದರೆ, ಅರ್ಹತೆ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ದಾಖಲಾತಿ ನೀಡುತ್ತಿಲ್ಲ.‘ ಎಂದರು.

‘ಎಸ್‌ಎಸ್‌ಪಿ ಜಾರಿಗೆ ಬರುವ ಮೊದಲು ವಿದ್ಯಾರ್ಥಿ ವೇತನ ನೇರವಾಗಿ ಕಾಲೇಜು ಆಡಳಿತ ಮಂಡಳಿಗೆ ಪಾವತಿ ಆಗುತ್ತಿತ್ತು. ಇದರಿಂದ ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡುತ್ತಿರಲಿಲ್ಲ. ಆದರೆ, ಈಗ ಡಿಬಿಟಿ ಮೂಲಕ ವಿದ್ಯಾರ್ಥಿಗಳಿಗೆ ನೇರವಾಗಿ ವಿದ್ಯಾರ್ಥಿ ವೇತನ ತಲುಪುವುದರಿಂದ ದಾಖಲಾತಿ ವೇಳೆ ಶುಲ್ಕ ಪಾವತಿಗೆ ಒತ್ತಾಯಿಸುತ್ತಿದ್ದಾರೆ. ಪ್ರಥಮ ವರ್ಷದ ಪದವಿ ದಾಖಲಾತಿ ಆರಂಭವಾಗಿದೆ. ಹೀಗಾಗಿ ಶುಲ್ಕ ಪಾವತಿ ಸಾಧ್ಯವಾಗದವರು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.