ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಕ್ಯೂಆರ್ ಕೋಡ್ ಆಧಾರಿತ ಟಿಕೆಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ.
ಪ್ರಯಾಣಿಕರು ಸಾಮಾನ್ಯ ವರ್ಗದ ಟಿಕೆಟ್‌ಗಳು ಮತ್ತು ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಖರೀದಿಸುವ ರೀತಿಯಲ್ಲಿ ಬದಲಾವಣೆ ತಂದಿದ್ದು, ಇದು 81 ನಿಲ್ದಾಣಗಳಾದ್ಯಂತ 94 ಅನ್‌ರಿಸರ್ವ್ಡ್ ಟಿಕೆಟಿಂಗ್ ಸಿಸ್ಟಮ್ (ಯುಟಿಎಸ್) ಕೌಂಟರ್‌ಗಳಲ್ಲಿ ಲಭ್ಯವಿದೆ ಎಂದು ಇಲಾಖೆ ತಿಳಿಸಿದೆ.
ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ, ಪ್ರಯಾಣಿಕರು ತಮ್ಮ ಮೊಬೈಲ್ ಫೋನ್ ವ್ಯಾಲೆಟ್‌ಗಳು ಅಥವಾ ಯುಪಿಐ-ಸಕ್ರಿಯಗೊಳಿಸಿದ ಬ್ಯಾಂಕ್ ಖಾತೆ ಬಳಸಿಕೊಂಡು ಸಲೀಸಾಗಿ ಪಾವತಿ ಮಾಡಬಹುದು. 25 ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು (ಎಟಿವಿಎಂ) 12 ಸ್ಥಳಗಳಲ್ಲಿ ಸ್ಥಾಪಿಸಲಾಗಿದೆ. ಇದು, ಕಾಯ್ದಿರಿಸದ ಪ್ರಯಾಣದ ಟಿಕೆಟ್‌ಗಳು ಮತ್ತು ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಸುಲಭವಾಗಿ ಖರೀದಿಸಲು ಅನುವು ಮಾಡಿಕೊಡುತ್ತದೆ ಎಂದು ಮಾಹಿತಿ ನೀಡಿದೆ.
ಟಿಕೆಟ್ ಬುಕಿಂಗ್ ಹೆಚ್ಚಿಸುವ ಪ್ರಯತ್ನದಲ್ಲಿ, ನಾಲ್ಕು ನಿಲ್ದಾಣಗಳಲ್ಲಿ ಪ್ರಯಾಣಿಕರ ಕಾಯ್ದಿರಿಸುವಿಕೆ ವ್ಯವಸ್ಥೆ (ಪಿಆರ್‌ಎಸ್) ಟಿಕೆಟ್ ಬುಕಿಂಗ್‌ಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಸೌಲಭ್ಯವನ್ನು ಸಹ ಪ್ರಾಯೋಗಿಕವಾಗಿ ಮಾಡಲಾಗುತ್ತಿದೆ. ಈ ಉಪಕ್ರಮವು ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸಲು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು ರೈಲ್ವೆ ಸಚಿವಾಲಯದ ಪ್ರಯತ್ನದ ಭಾಗವಾಗಿದೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್‌ವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.