ಮೈಸೂರು: ‘ಪಶುಪಾಲನಾ ಇಲಾಖೆಯಲ್ಲಿ 700 ‘ಡಿ’ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಶೀಘ್ರ ಪ್ರಕ್ರಿಯೆ ಆರಂಭಿಸಲಾಗು
ವುದು’ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಇಲ್ಲಿ ಶನಿವಾರ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರಸಂಕಿರಣ ಮತ್ತು ಕಾಲುಬಾಯಿ ಜ್ವರದ ವಿರುದ್ಧ 6ನೇ ಸುತ್ತಿನ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಈಗಾಗಲೇ 400 ಪಶುವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿದ್ದು, 400 ಕಾಯಂ ವೈದ್ಯರ ನೇಮಕಾತಿಗೂ ಕೆಪಿಎಸ್‌ಸಿ ಮಟ್ಟದಲ್ಲಿ ಪ್ರಕ್ರಿಯೆ ನಡೆದಿದೆ’ ಎಂದರು.
ಇಲಾಖೆಯ ನಿರ್ದೇಶಕ ಡಾ.ಮಂಜುನಾಥ್ ಎಸ್.ಪಾಳೇಗಾರ ಮಾತನಾಡಿ, ‘ಅಕ್ಟೋಬರ್ 21ರಿಂದ 98 ಲಕ್ಷ ರಾಸುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ನೀಡಲಾಗುವುದು. ರಾಜ್ಯದಲ್ಲಿ ಎಲ್ಲಿಯೂ ರೋಗ ಕಂಡುಬಂದಿಲ್ಲ. ಕರುಗಳಿಗೂ ಲಸಿಕೆಯನ್ನು ಉಚಿತವಾಗಿ ಹಾಕಲಾಗುವುದು’ ಎಂದು ತಿಳಿಸಿದರು.
ಶಾಸಕ ಕೆ.ಹರೀಶ್ ಗೌಡ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.