ADVERTISEMENT

ಮೈಸೂರು: ಆಶಾ ಕಾರ್ಯಕರ್ತೆಯರ ರಕ್ಷಣೆಗೆ ಮೊರೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 14:14 IST
Last Updated 1 ಜುಲೈ 2021, 14:14 IST
ರಕ್ಷಣೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು
ರಕ್ಷಣೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು   

ಮೈಸೂರು: ಆಶಾ ಕಾರ್ಯಕರ್ತೆಯರ ರಕ್ಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರತಿನಿಧಿಗಳು ಗುರುವಾರ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೋವಿಡ್ ಹರಡುವುದನ್ನು ತಡೆಯಲು ತಮ್ಮ ಜೀವದ ಹಂಗು ತೊರೆದು ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಆದರೆ, ಇವರ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ ಎಂದು ಸಂಘದ ರಾಜ್ಯ ಸಲಹೆಗಾರರಾದ ಪಿ.ಎಸ್.ಸಂಧ್ಯಾ ಆತಂಕ ವ್ಯಕ್ತಪಡಿಸಿದರು.

ಸೋಂಕಿತರ ಗಂಟಲು ದ್ರವ ಸಂಗ್ರಹಿಸುವುದು, ಸೋಂಕಿತರ ಚಲನವಲನಗಳ ಮೇಲೆ ನಿಗಾ ವಹಿಸುವುದು, ಅವರ ಯೋಗಕ್ಷೇಮ ನೋಡಿಕೊಳ್ಳುವ ಕೆಲಸವನ್ನು ಇವರು ಮಾಡುತ್ತಿದ್ದಾರೆ. ಆದರೆ, ಈ ಸಂದರ್ಭದಲ್ಲಿ ಇವರು ಅವಾಚ್ಯ ಶಬ್ದಗಳ ನಿಂದನೆಗೆ ಒಳಗಾಗುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಬನ್ನೂರಿನ ಆಶಾ ಕಾರ್ಯಕರ್ತೆ ಲಕ್ಷ್ಮಿ ಮೇಲೆ ಈಚೆಗೆ ಹಲ್ಲೆ ನಡೆದಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಆಶಾ ಕಾರ್ಯಕರ್ತೆಯರು ಬದುಕುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಆಶಾ ಕಾರ್ಯಕರ್ತೆಯರ ಭದ್ರತೆಗೆ ವಿಶೇಷ ಗಮನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಂಘದ ಜಿಲ್ಲಾ ಕಾರ್ಯದರ್ಶಿ ಮಂಜುಳಾ ಸೇರಿದಂತೆ ಸುಮಾರು 50ಕ್ಕೂ ಹೆಚ್ಚಿನ ಆಶಾ ಕಾರ್ಯಕರ್ತೆಯರು ಮನವಿ ಸಲ್ಲಿಸುವ ವೇಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.