ADVERTISEMENT

ಲೋಕಾಯುಕ್ತ ಪೊಲೀಸರಿಂದ ನಿವೃತ್ತ ಐಎಎಸ್‌ ಅಧಿಕಾರಿ ಪಾಲಯ್ಯ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2024, 14:16 IST
Last Updated 24 ಅಕ್ಟೋಬರ್ 2024, 14:16 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

ಮೈಸೂರು: ನಿವೃತ್ತ ಐಎಎಸ್‌ ಅಧಿಕಾರಿ ಎಸ್. ಪಾಲಯ್ಯ ಗುರುವಾರ ಇಲ್ಲಿನ ಲೋಕಾಯುಕ್ತ ಎಸ್‌.ಪಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.

ಅವರು 2004-05ರಲ್ಲಿ ಮೈಸೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಕೆಲ ಕಾಲ ಮುಡಾ ಆಯುಕ್ತರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜು ಅವರಿಂದ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರಲ್ಲಿನ ಜಮೀನು ಖರೀದಿಸಿದ ವೇಳೆ ಜಮೀನು ಪರಭಾರೆ, ಖಾತೆ ಸೇರಿದಂತೆ ಕೆಲವು ಕಡತಗಳಿಗೆ ಸಹಿ ಮಾಡಿದ್ದರು.

ADVERTISEMENT

ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌.ಪಿ. ಟಿ.ಜೆ. ಉದೇಶ್‌ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸಿತು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪಾಲಯ್ಯ, ‘ಅಧಿಕಾರಿಗಳು ಮೊದಲ ನೋಟಿಸ್ ಕೊಟ್ಟಾಗ ಅನ್ಯ ಕಾರ್ಯಗಳ ನಿಮಿತ್ತ ಹಾಜರಾಗಲು ಆಗಿರಲಿಲ್ಲ. ಜಮೀನಿನ ವಿಚಾರದಲ್ಲಿ ನಾನು ಸಹಿ ಮಾಡಿದ ಕಡತಗಳಿಗೆ ಸಂಬಂಧಿಸಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.