ಮೈಸೂರು: ಉತ್ತರ ಪ್ರದೇಶದಲ್ಲಿ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ರಾವಣ್ ಮೇಲೆ ನಡೆದಿರುವ ಗುಂಡಿನ ದಾಳಿ ಖಂಡಿಸಿ ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಸಂಘದ ಕಾರ್ಯಕರ್ತರು ಮಾನಸ ಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು.
‘ಸಂಘಟನೆಯ ನಾಯಕರ ಧ್ವನಿಯನ್ನು ಅಡಗಿಸಲು ದಾಳಿ ನಡೆದಿದೆ, ಇದು ಖಂಡನೀಯ. ಉತ್ತರ ಪ್ರದೇಶದ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ. ದಾಳಿ ಪ್ರಕರಣದ ಹಿಂದಿರುವ ಆರೋಪಿಗಳ ಶೀಘ್ರ ಬಂಧನ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಸರ್ಕಾರವು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಪರಂಜ್ಯೋತಿ ಹಾಗೂ ಸಂಘಟನೆಯ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.