ಮೈಸೂರು: ಬೆಂಗಳೂರು– ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಸಿದ್ದಲಿಂಗಪುರದಲ್ಲಿ ಮೇ 25ರಿಂದ ಒಟ್ಟು 80 ಜನರಲ್ಲಿ ವಾಂತಿ– ಭೇದಿ ಕಾಣಿಸಿಕೊಂಡಿದ್ದು, ಇಬ್ಬರಿಗೆ ಕಾಲರಾ ದೃಢಪಟ್ಟಿದೆ.
‘ಮಂಗಳವಾರದಿಂದ 17 ಜನರು ಖಾಸಗಿ, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದೆ. ಉಳಿದವರು ಗುಣಮುಖರಾಗಿದ್ದಾರೆ. ಬುಧವಾರ ಹಾಗೂ ಗುರುವಾರ ತಲಾ ಒಬ್ಬರಿಗೆ ಕಾಲರಾ ದೃಢಪಟ್ಟಿದೆ. ಆರೋಗ್ಯ ಇಲಾಖೆ ಅಧಿಕಾರಿ ಸಿಬ್ಬಂದಿ ಮನೆ, ಮನೆಗೆ ತೆರಳಿ ಮಾಹಿತಿ ಕಳೆಹಾಕುತ್ತಿದ್ದಾರೆ. ವಾಂತಿ, ಭೇದಿ ಗುಣಲಕ್ಷಣವಿದ್ದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಗ್ರಾಮದಲ್ಲಿ ಕುಡಿಯುವ ನೀರಿನ ಐದು ಕೊಳವೆ ಬಾವಿ ಇದ್ದು, ನೀರಿನ ಮಾದರಿ ಪರೀಕ್ಷೆಯಲ್ಲಿ ಒಂದು ಕೊಳವೆಬಾವಿ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಸಾಬೀತಾಗಿದೆ. ಇತರೆ ನೀರಿನ ಮೂಲಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಾಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಡ್ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.