ADVERTISEMENT

ನಿವೇಶನ ಪಡೆಯಲು ಸಿದ್ದರಾಮಯ್ಯ ಒಪ್ಪಿರಲಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2024, 14:58 IST
Last Updated 19 ನವೆಂಬರ್ 2024, 14:58 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)

   

– ಪ್ರಜಾವಾಣಿ ಚಿತ್ರ

ಮೈಸೂರು: ‘ನಾನು ಮುಡಾ ಅಧ್ಯಕ್ಷನಾಗಿದ್ದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಕೆಸರೆ ಜಮೀನಿಗೆ ಬದಲಾಗಿ ಸಮನಾಂತರ ಬಡಾವಣೆಯಲ್ಲಿ ಬದಲಿ ಜಾಗ ಕೊಡಲು ತೀರ್ಮಾನ ಆಗಿತ್ತು. ಆದರೆ, ಅದಕ್ಕೆ ಸಿದ್ದರಾಮಯ್ಯ ಒಪ್ಪಿರಲಿಲ್ಲ’ ಎಂದು ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್ ಹೇಳಿದರು.

ADVERTISEMENT

ಲೋಕಾಯುಕ್ತ ಕಚೇರಿ ಬಳಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ ಪಾರ್ವತಿ ಅವರ ಜಮೀನನ್ನು ಮುಡಾ ವಶಪಡಿಸಿಕೊಂಡಿದ್ದು, ಬದಲಿ ನಿವೇಶನ ನೀಡುವ ವಿಚಾರ ಸಭೆಯಲ್ಲಿ ಚರ್ಚೆಗೆ ಬಂದು, ಬದಲಿ ಜಾಗ ನೀಡಲು ತೀರ್ಮಾನಿಸಲಾಯಿತು. ನಾನೇ ಸಿದ್ದರಾಮಯ್ಯ ಅವರಿಗೆ ಈ ವಿಚಾರ ತಿಳಿಸಿ ಬದಲಿ ಜಾಗ ಪಡೆಯುವಂತೆ ಕೋರಿದ್ದೆ. ಆದರೆ ಮುಖ್ಯಮಂತ್ರಿ ಆಗಿರುವ ಕಾರಣ ಈ ರೀತಿ ನಿರ್ಣಯಗಳು ಬೇಡ ಎಂದು ಸಿದ್ದರಾಮಯ್ಯ ನಿರಾಕರಿಸಿದ್ದರು’ ಎಂದರು.

‘ನನ್ನ ಅವಧಿಯಲ್ಲಿ ನಿವೇಶನ ಸಂಬಂಧ ಸಿದ್ದರಾಮಯ್ಯ ಕುಟುಂಬದವರು ಯಾರೂ ಪತ್ರ ಬರೆದಿಲ್ಲ. ಪ್ರಭಾವ ಬೀರಿಲ್ಲ. ಇ.ಡಿ.ಯಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿಚಾರಣೆ ಎದುರಿಸುತ್ತೇನೆ’ ಎಂದರು.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಧ್ರುವಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದ್ದು, ಸದ್ಯದಲ್ಲೇ ವಿಚಾರಣೆಗೆ ಬರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.