ADVERTISEMENT

MUDA Scam | ಮುಖ್ಯಮಂತ್ರಿ ವಿಚಾರಣೆ ಸ್ವಾಗತಾರ್ಹ: ದೂರುದಾರ ಸ್ನೇಹಮಯಿ ಕೃಷ್ಣ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 16:08 IST
Last Updated 5 ನವೆಂಬರ್ 2024, 16:08 IST
<div class="paragraphs"><p>ಸ್ನೇಹಮಯಿ ಕೃಷ್ಣ</p></div>

ಸ್ನೇಹಮಯಿ ಕೃಷ್ಣ

   

ಮೈಸೂರು: ‘ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ತನಿಖಾಧಿಕಾರಿ ಕಚೇರಿಗೇ ಕರೆಸಿಕೊಂಡು ತನಿಖೆ ಮಾಡುತ್ತಿರುವುದು ಸ್ವಾಗತಾರ್ಹ’ ಎಂದು ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.

ಇಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಕೊಡಿಸಬೇಕೆಂಬ ಮನೋಭಾವ ಲೋಕಾಯುಕ್ತ ತನಿಖಾಧಿಕಾರಿಗೆ ಇದ್ದರೂ ಲೋಕಾಯುಕ್ತ ಸಂಸ್ಥೆಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡುತ್ತದೆ. ಇಲ್ಲಿ ಸ್ವತಃ ಮುಖ್ಯಮಂತ್ರಿಯೇ ಆರೋಪಿ ಆಗಿರುವುದರಿಂದ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಅಂತಿಮ ವರದಿಗೆ ನ್ಯಾಯಾಲಯ ಛೀಮಾರಿ ಹಾಕಿದ ಉದಾಹರಣೆ ಇದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದೇವೆ’ ಎಂದು ವಿವರಿಸಿದರು.

ADVERTISEMENT

‘ಇ.ಡಿ. ಕೇವಲ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಮಾತ್ರ ಮಾಡುತ್ತದೆ. ಆದರೆ, ಬೇನಾಮಿ ಕಾಯ್ದೆ, ಐಪಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿ ತನಿಖೆ ನಡೆಸಲು ಇ.ಡಿ.ಗೆ ಅಧಿಕಾರವಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ನ್ಯಾಯಾಲಯವನ್ನು ಕೋರಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.