ADVERTISEMENT

ಕ್ರೀಡೆಯಿಂದ ಉತ್ತಮ ಆರೋಗ್ಯ: ಸಾಂಬಶಿವಯ್ಯ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 8:47 IST
Last Updated 20 ಸೆಪ್ಟೆಂಬರ್ 2024, 8:47 IST
ನಂಜನಗೂಡು ರಸ್ತೆಯಲ್ಲಿರುವ ಜೆಎಸ್ಎಸ್‌ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಪ್ರೊ.ಬಿ.ವಿ.ಸಾಂಬಶಿವಯ್ಯ, ಎಂ.ಪ್ರಭು, ಎಸ್.ಸೋಮಶೇಖರ, ಬಿ.ಪ್ರಭುಸ್ವಾಮಿ, ಎಲ್. ವಿನಯ್‌ಕುಮಾರ್, ಎಂ.ಕಾರ್ತಿಕ್, ನಿರಂಜನ್, ಅರವಿಂದ ಪಾಲ್ಗೊಂಡರು
ನಂಜನಗೂಡು ರಸ್ತೆಯಲ್ಲಿರುವ ಜೆಎಸ್ಎಸ್‌ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಪ್ರೊ.ಬಿ.ವಿ.ಸಾಂಬಶಿವಯ್ಯ, ಎಂ.ಪ್ರಭು, ಎಸ್.ಸೋಮಶೇಖರ, ಬಿ.ಪ್ರಭುಸ್ವಾಮಿ, ಎಲ್. ವಿನಯ್‌ಕುಮಾರ್, ಎಂ.ಕಾರ್ತಿಕ್, ನಿರಂಜನ್, ಅರವಿಂದ ಪಾಲ್ಗೊಂಡರು   

ಮೈಸೂರು: ‘ಆಟೋಟಗಳು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುತ್ತವೆ. ಕ್ರೀಡಾಪಟುಗಳು ಸ್ಪರ್ಧಾ ಸ್ಫೂರ್ತಿಯಿಂದ ಪಾಲ್ಗೊಳ್ಳಿ’ ಎಂದು ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಹೇಳಿದರು.

ಕಾಲೇಜಿನಲ್ಲಿ ಗುರುವಾರ ಶಿವರಾತ್ರಿ ರಾಜೇಂದ್ರ ಶ್ರೀಗಳ 109ನೇ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಅಂತರ ಕಾಲೇಜು ಪುರುಷರ ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್‌ ಹಾಗೂ ಮಹಿಳೆಯರ ಥ್ರೋಬಾಲ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಗರ ವಲಯದಲ್ಲಿ ಕೇಂದ್ರೀಕೃತವಾಗಿದ್ದ ಶಿಕ್ಷಣ ವ್ಯವಸ್ಥೆಯನ್ನು ಗ್ರಾಮೀಣ ವಲಯಕ್ಕೆ ಕೊಂಡೊಯ್ದು ಶಿಕ್ಷಣ ಕ್ರಾಂತಿ ಮಾಡಿದ್ದು ರಾಜೇಂದ್ರ ಶ್ರೀಗಳು. ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಉತ್ತಮ ಶಿಕ್ಷಣ ದೊರೆಯುವಂತಾಯಿತು’ ಎಂದು ಸ್ಮರಿಸಿದರು.

ADVERTISEMENT

ಕ್ರೀಡಾಕೂಟದ ವಾಲಿಬಾಲ್‌ ಟೂರ್ನಿಯಲ್ಲಿ 25, ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ 12 ಹಾಗೂ ಥ್ರೋಬಾಲ್‌ನಲ್ಲಿ 19 ತಂಡಗಳು ಪಾಲ್ಗೊಂಡವು.

ಪದವಿ ಕಾಲೇಜಿನ ಪ್ರಾಂಶುಪಾಲ ಎಂ.ಪ್ರಭು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಸೋಮಶೇಖರ, ಪರೀಕ್ಷಾ ನಿಯಂತ್ರಣಾಧಿಕಾರಿ ಬಿ. ಪ್ರಭುಸ್ವಾಮಿ, ಎನ್‌ಸಿಸಿ ಅಧಿಕಾರಿ ಎಲ್. ವಿನಯ್‌ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ. ಕಾರ್ತಿಕ್, ನಿರಂಜನ್, ಅರವಿಂದ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.