ADVERTISEMENT

ಮೈಸೂರು: ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರ ನಾಳೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 5:57 IST
Last Updated 22 ಸೆಪ್ಟೆಂಬರ್ 2024, 5:57 IST

ಮೈಸೂರು: ಲಲಿತಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಹಾಗೂ ಕರ್ನಾಟಕ ಶಿಲ್ಪಕಲಾ ಶಿಬಿರ ಅಕಾಡೆಮಿ ಸಹಯೋಗದಲ್ಲಿ ಸೆ.23ರಂದು ಬೆಳಿಗ್ಗೆ 10ಕ್ಕೆ ಸಿದ್ಧಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನ (ಕಾವಾ) ಆವರಣದಲ್ಲಿ ‘ರಾಜ್ಯ ಮಟ್ಟದ ಶಿಲ್ಪಕಲಾ ಶಿಬಿರ’ದ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದು, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ.

ಅ.3ರವರೆಗೆ ಪ್ರಖ್ಯಾತ ಶಿಲ್ಪಕಲಾ ಕಲಾವಿದರಿಂದ ಶಿಬಿರ ನಡೆಯಲಿದೆ. ಶಿಲ್ಪಕಲೆ ಮತ್ತು ಲಲಿತಕಲಾ ಶಿಬಿರದಲ್ಲಿ ರಚನೆಯಾದ ಕಲಾಕೃತಿಗಳ ಪ್ರದರ್ಶನ ಸೆ.3ರಂದು ಸಂಜೆ 4ಕ್ಕೆ ನಡೆಯಲಿದೆ. ರಾಜ್ಯ ಮಟ್ಟದ ವೃತ್ತಿಪರ ಮತ್ತು ಹವ್ಯಾಸಿ ಕಲಾವಿದರ ಆಹ್ವಾನಿತ ಕಲಾಕೃತಿಗಳ ಪ್ರದರ್ಶನ, ಇಂದಿರಾಗಾಂಧಿ ಮಾನವ ಸಂಗ್ರಹಾಲಯ, ಭೋಪಾಲ್ ಮತ್ತು ಕರ್ನಾಟಕ ಕರಕುಶಲ ಕಲಾವಿದರ ಕಲಾಕೃತಿಗಳ ಪ್ರದರ್ಶನ, ಪ್ರಾತ್ಯಕ್ಷಿಕೆ ಮತ್ತು ಮಾರಾಟ ಮಳಿಗೆ ಉದ್ಘಾಟನೆಯೂ ಜರುಗಲಿದೆ. ಅ.7ರವರೆಗೆ ಪ್ರದರ್ಶನವಿರಲಿದೆ.

ADVERTISEMENT

ಅ.6ರಂದು ಬೆಳಿಗ್ಗೆ 10ಕ್ಕೆ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗಾಗಿ ಸ್ಥಳದಲ್ಲಿ ವಿವಿಧ ವಿಭಾಗಗಳ ಚಿತ್ರ ಬಿಡಿಸುವ ಮತ್ತು ಮಣ್ಣಿನ ಕಲಾಕೃತಿ ರಚಿಸುವ ಸ್ಪರ್ಧೆ ಆಯೋಜಿಸಲಾಗಿದೆ. 7ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ಹಾಗೂ ಚಿತ್ರಕಲಾ ಮತ್ತು ಮಣ್ಣಿನ ಕಲಾಕೃತಿಗಳ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.