ಮೈಸೂರು: ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ಬೇಡಿಕೆಗಳು ನ್ಯಾಯಯುತವಾಗಿವೆ. ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದೆ. ಸರ್ಕಾರ ತಕ್ಷಣವೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.