ADVERTISEMENT

ಮೈಸೂರು: ಸ್ವಚ್ಛತಾ ಅಭಿಯಾನಕ್ಕೆ ಸೋಮಣ್ಣ ಚಾಲನೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 12:53 IST
Last Updated 20 ಸೆಪ್ಟೆಂಬರ್ 2019, 12:53 IST
ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಶುಕ್ರವಾರ ನಸುಕಿನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್ ಇದ್ದಾರೆ
ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಶುಕ್ರವಾರ ನಸುಕಿನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್ ಇದ್ದಾರೆ   

ಮೈಸೂರು: ‘ಎಲ್ಲರೂ ತಮ್ಮ ಸುತ್ತಲಿನ ಪರಿಸರವನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕಿವಿಮಾತು ಹೇಳಿದರು.

ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ನಗರದ ದೊಡ್ಡಕೆರೆ ಮೈದಾನದಲ್ಲಿ ಶುಕ್ರವಾರ ನಸುಕಿನಲ್ಲೇ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ನಗರದ 65 ವಾರ್ಡ್‌ಗಳಲ್ಲಿ ಇಂದಿನಿಂದ ಐದು ದಿನ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು. ಇದರೊಂದಿಗೆ ನಾಗರಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವನ್ನೂ ಮೂಡಿಸುವ ಗುರಿ ಹೊಂದಲಾಗಿದೆ’ ಎಂದರು.

‘ಈ ಸ್ವಚ್ಛತಾ ಅಭಿಯಾನದಲ್ಲಿ ಮೈಸೂರು ಮಹಾನಗರ ಪಾಲಿಕೆ, ಮುಡಾ, ನೀರು ಸರಬರಾಜು ಮಂಡಳಿ, ಕೊಳಚೆ ನಿರ್ಮೂಲನಾ ಮಂಡಳಿ, ಗೃಹ ನಿರ್ಮಾಣ ಮಂಡಳಿ ಭಾಗಿಯಾಗಲಿದ್ದು, ಗುತ್ತಿಗೆದಾರರು ಕೈಜೋಡಿಸಿರುವುದು ಶ್ಲಾಘನೀಯ’ ಎಂದರು.

ADVERTISEMENT

ಶಾಸಕ ಎಲ್.ನಾಗೇಂದ್ರ, ಮೇಯರ್ ಪುಷ್ಪಲತಾ ಜಗನ್ನಾಥ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಸದಸ್ಯರಾದ ಸಂದೇಶ್ ಸ್ವಾಮಿ, ಮಾ.ವಿ.ರಾಮಪ್ರಸಾದ್, ಮಂಜುನಾಥ್ ಉಪಸ್ಠಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.