ADVERTISEMENT

ಮೈಸೂರು: ಜೂನ್‌ 20ರಿಂದ ಅಧಿಕಾರಿಗಳಿಂದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಜೂನ್ 2024, 16:18 IST
Last Updated 15 ಜೂನ್ 2024, 16:18 IST

ಮೈಸೂರು: ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಎಸ್ಪಿ ಜಂಟಿಯಾಗಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಜೂನ್ 20ರಿಂದ ಜುಲೈ 4ರವರೆಗೆ ನಡೆಸಲಿದ್ದಾರೆ.

20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಮೈಸೂರು ತಾಲ್ಲೂಕಿನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಎಚ್.ಡಿ. ಕೋಟೆಯ ಅಂಬೇಡ್ಕರ್‌ ಭವನದಲ್ಲಿ 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಎಚ್‌.ಡಿ. ಕೋಟೆ ತಾಲ್ಲೂಕಿನವರಿಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ (ಸರಗೂರು ವ್ಯಾಪ್ತಿಯವರಿಗೆ) ನಡೆಯಲಿದೆ.

ADVERTISEMENT

29ರಂದು ತಹಶೀಲ್ದಾರ್ ಕಚೇರಿಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಕೆ.ಆರ್. ನಗರ ತಾಲ್ಲೂಕು ಹಾಗೂ ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಸಾಲಿಗ್ರಾಮದ ವ್ಯಾಪ್ತಿಯವರ ಅಹವಾಲು ಆಲಿಸಲಾಗುವುದು.

ಜುಲೈ 2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ತಿ.ನರಸೀಪುರ ತಹಶೀಲ್ದಾರ್ ಕಾರ್ಯಾಲಯ, ಜುಲೈ 3ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಂಜನಗೂಡಿನ ಅಂಬೇಡ್ಕರ್ ಭವನ, ಜೂನ್ 4ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಹುಣಸೂರಿನ ಅಂಬೇಡ್ಕರ್ ಭವನ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಪಿರಿಯಾಪಟ್ಟಣ ತಾಲ್ಲೂಕಿನ ಜನಸ್ಪಂದನ ಕಾರ್ಯಕ್ರಮವನ್ನು ಅಲ್ಲಿನ ಅರಸು ಭವನದಲ್ಲಿ ನಡೆಸಲಾಗುವುದು.

ಸಂಬಂಧಪಟ್ಟ ತಾಲ್ಲೂಕಿನ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.