ಮೈಸೂರು: ‘ಕಾಂತರಾಜು ಆಯೋಗದ ವರದಿ (ಜಾತಿ ಗಣತಿ) ನನ್ನ ಕೈಸೇರಿಲ್ಲ. ಆಗಲೇ ಅದಕ್ಕೆ ವಿರೋಧವೆಂದರೆ ನಾನೇನು ಮಾಡಲಿ? ವರದಿಯಲ್ಲಿ ಏನಿದೆ ಏಂಬುದೇ ಗೊತ್ತಿಲ್ಲ. ಅಂಕಿ–ಅಂಶವನ್ನೇ ತಿಳಿಯದೇ ಗೊತ್ತಿಲ್ಲದೆ ಅದರ ಬಗ್ಗೆ ಮಾತನಾಡುವುದು ಹೇಗೆ? ಈ ತಿಂಗಳೊಳಗೆ ವರದಿ ಕೊಡಬಹುದೇನೋ. ಸಿಕ್ಕ ನಂತರ ನೋಡೋಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಕಾಂತರಾಜು ವರದಿಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಇಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, ‘ಈಶ್ವರಪ್ಪ ಸವಕಲು ನಾಣ್ಯ. ಆದ್ದರಿಂದಲೇ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ. ಅವರ ಮಾತುಗಳಿಗೆ ಬೆಲೆಯೇ ಇಲ್ಲ. ವರದಿ ಮಂಡಿಸುವಂತೆ ನನ್ನೊಂದಿಗೆ ಅವರೂ ಒತ್ತಾಯ ಮಾಡಿದ್ದರಲ್ಲಾ?. ಈಗ, ಅದನ್ನು ಸುಟ್ಟು ಹಾಕುತ್ತೇವೆ ಎಂದರೆ ಏನರ್ಥ?’ ಎಂದು ವ್ಯಂಗ್ಯವಾಗಿ ಕೇಳಿದರು.
‘ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.