ADVERTISEMENT

ಮೈಸೂರು | ಸೆರೆಯಾಗದ ಹುಲಿ: ಜನರಲ್ಲಿ ಕರಗದ ದುಗುಡ

​ಪ್ರಜಾವಾಣಿ ವಾರ್ತೆ
Published 1 ಜುಲೈ 2024, 16:18 IST
Last Updated 1 ಜುಲೈ 2024, 16:18 IST

ಮೈಸೂರು: ತಾಲ್ಲೂಕಿನ ವರಕೋಡು-ಮೂಡಲಹುಂಡಿ ಗ್ರಾಮಕ್ಕೆ ಹೊಂದಿಕೊಂಡಿರುವ ದೊಣ್ಣೆಕಲ್ಲು ಬೆಟ್ಟದ ಸಮೀಪದ ರಸ್ತೆಯಲ್ಲಿ ಶನಿವಾರ ಕಾಣಿಸಿಕೊಂಡಿದ್ದ ಹುಲಿ ಸೆರೆಗೆ ಕಾರ್ಯಾಚರಣೆ ಮುಂದುವರಿದಿದ್ದು, 48 ಗಂಟೆಗಳಾದರೂ ಪತ್ತೆ ಆಗದಿರುವುದು ಆತಂಕಕ್ಕೆ ಕಾರಣವಾಗಿದೆ.

ಶನಿವಾರ ಬೆಳಿಗ್ಗೆ ಹುಲಿ ಪ್ರತ್ಯಕ್ಷವಾಗಿತ್ತು. ಅದು ಮತ್ತೆ ಕಾಣಿಸಿಕೊಂಡಿಲ್ಲದಿರುವುದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿಂತಾಕ್ರಾಂತರಾಗಿದ್ದರೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮುಂದುವರಿದಿದೆ. ಹುಲಿಯ ಚಲನವಲನ ಕ್ಯಾಮೆರಾಗಳಲ್ಲಿ ಸೆರೆಯಾಗಿಲ್ಲ. ಇದರಿಂದಾಗಿ ಜನರು ನಿರಾತಂಕವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ.

ಬೆಟ್ಟದ ತಪ್ಪಲಿನ ಕಾಲುವೆ ಏರಿ ಮೇಲೆ ಜನರು ಹಾಗೂ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.