ADVERTISEMENT

ಮೈಸೂರು: ಎಚ್.ವಿ.ರಾಜೀವ್‌ಗೆ ವೃಕ್ಷ ಪೋಷಕ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2024, 7:59 IST
Last Updated 8 ಜೂನ್ 2024, 7:59 IST
ಮೈಸೂರಿನ ಸುಯೋಗ್‌ ಆಸ್ಪತ್ರೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮವನ್ನು ಕೆ.ಬಿ.ಗಣಪತಿ ಉದ್ಘಾಟಿಸಿದರು. ಡಾ.ಎಸ್.ಪಿ.ಯೋಗಣ್ಣ, ಕೆ. ಮರಿಗೌಡ, ಕೆ.ಟಿ. ವೀರಪ್ಪ, ಸಿ.ಪಿ.ಕೃಷ್ಣಕುಮಾರ್‌, ಬಿ.ಆರ್. ಪೈ, ಮಡ್ಡೀಕೆರೆ ಗೋಪಾಲ್ ಭಾಗವಹಿಸಿದ್ದರು
ಮೈಸೂರಿನ ಸುಯೋಗ್‌ ಆಸ್ಪತ್ರೆಯಲ್ಲಿ ಬುಧವಾರ ನಡೆದ ಕಾರ್ಯಕ್ರಮವನ್ನು ಕೆ.ಬಿ.ಗಣಪತಿ ಉದ್ಘಾಟಿಸಿದರು. ಡಾ.ಎಸ್.ಪಿ.ಯೋಗಣ್ಣ, ಕೆ. ಮರಿಗೌಡ, ಕೆ.ಟಿ. ವೀರಪ್ಪ, ಸಿ.ಪಿ.ಕೃಷ್ಣಕುಮಾರ್‌, ಬಿ.ಆರ್. ಪೈ, ಮಡ್ಡೀಕೆರೆ ಗೋಪಾಲ್ ಭಾಗವಹಿಸಿದ್ದರು   

ಮೈಸೂರು: ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಎಚ್.ವಿ.ರಾಜೀವ್ ಅವರ ಸಾಧನೆಯನ್ನು ಪರಿಗಣಿಸಿ ಸುಯೋಗ್‌ ಆಸ್ಪತ್ರೆಯಿಂದ ವೃಕ್ಷ ಪೋಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಆಸ್ಪತ್ರೆಯ ಕೈತೋಟದಲ್ಲಿ ನಡೆದ ಹೂವಿನ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪತ್ರಕರ್ತ ಕೆ.ಬಿ.ಗಣಪತಿ ಕಾರ್ಯಕ್ರಮ ಉದ್ಘಾಟಿಸಿ, ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಇದು ಸರ್ಕಾರದ ಕೆಲಸ ಎಂದು ಕಾಯದೆ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಕೆ.ಬಿ.ಗಣಪತಿ ಹಾಗೂ ಮುಡಾ ಅಧ್ಯಕ್ಷ ಕೆ. ಮರಿಗೌಡ ಅವರನ್ನು ಆಸ್ಪತ್ರೆಯಿಂದ ಸನ್ಮಾನಿಸಲಾಯಿತು.

ಆಸ್ಪತ್ರೆಯ ಅಧ್ಯಕ್ಷ ಡಾ. ಎಸ್.ಪಿ.ಯೋಗಣ್ಣ, ಮೈಸೂರು ವಿಶ್ವವಿದ್ಯಾಲಯ ಪ್ರಸಾರಾಂಗದ ನಿವೃತ್ತ ನಿರ್ದೇಶಕ ಕೆ.ಟಿ.ವೀರಪ್ಪ, ಸಾಹಿತಿ ಸಿ.ಪಿ.ಕೃಷ್ಣಕುಮಾರ್, ಉದ್ಯಮಿ ಬಿ.ಆರ್.ಪೈ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುಯೋಗ್‌ ಯೋಗಣ್ಣ, ವೈದ್ಯಕೀಯ ನಿರ್ದೇಶಕ ಡಾ. ರಾಜೇಂದ್ರ ಪ್ರಸಾದ್, ನಿರ್ದೇಶಕಿ ಡಾ.ಸೀಮಾ ಯೋಗಣ್ಣ, ಟ್ರಸ್ಟಿ ಸುಧಾ ಯೋಗಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.