ಕೆ.ಆರ್.ನಗರ: ಇಲ್ಲಿನ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಬಿ.ಸಿ.ಅರವಿಂದ್ರ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಎರಡು ಜೋಡಿಯ ಮನವೊಲಿಸಿ ಶನಿವಾರ ಒಂದು ಮಾಡಲಾಯಿತು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದ 98, ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದ 96 ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಬಾಕಿ ಇದ್ದ 92, ಒಟ್ಟು 286 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ ಮಾಡಲಾಯಿತು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಬಿ.ಸಿ.ಅರವಿಂದ್ರ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಆರ್.ಪವಿತ್ರಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಸ್.ಚಂದನ್ ಲೋಕ ಅದಾಲತ್‌ನಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.