ಮೈಸೂರು: ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಇರುವ ಉದ್ಯಾನದಲ್ಲಿ ಶುಕ್ರವಾರ ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ಸ್ಥಾಪಿಸಿದ್ದು, ಪಾಲಿಕೆಯು ಶನಿವಾರ ತೆರವುಗೊಳಿಸಿದೆ.
ಅಭಿಮಾನಿಗಳು ಪಾಲಿಕೆ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ..
'ತೆರವು ಕ್ರಮಕ್ಕೆ ಮುಂದಾದಾಗ ಅಭಿಮಾನಿಗಳು ಅಧಿಕಾರಿಗಳು, ಪೊಲೀಸರ ಕಾಲಿಗೆ ಬಿದ್ದು, ತೆರವುಗೊಳಿಸದಂತೆ ಮನವಿ ಮಾಡಿಕೊಂಡರೂ ಒಪ್ಪಲಿಲ್ಲ. ಇದರಿಂದ ಅಭಿಮಾನಿಗಳಿಗೆ ನೋವಾಗಿದೆ' ಎಂದು ಡಾ.ವಿಷ್ಣು ಸಮಿತಿ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲ ಅನಧಿಕೃತ ಪ್ರತಿಮೆಗಳ ತೆರವಿಗೂ ಅವರು ಒತ್ತಾಯಿಸಿದರು.
ಅಭಿಮಾನಿಗಳು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.