ಮೈಸೂರು: ಇಲ್ಲಿನ ಸಾವರ್ಕರ್ ಪ್ರತಿಷ್ಠಾನದಿಂದ ನೀಡುವ ‘ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ’ಗೆ ಇತಿಹಾಸ ತಜ್ಞ ವಿಕ್ರಂ ಸಂಪತ್ ಭಾಜನರಾಗಿದ್ದಾರೆ. ಪ್ರಶಸ್ತಿಯು ₹1 ಲಕ್ಷ ನಗದು ಪುರಸ್ಕಾರವನ್ನು ಒಳಗೊಂಡಿದೆ.
‘ಈ ವರ್ಷದಿಂದ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ನೀಡಲು ಆರಂಭಿಸಲಾಗಿದೆ. ವಿಕ್ರಂ ಅವರ ಬರವಣಿಗೆ ಮತ್ತು ಸಂಶೋಧನೆಯನ್ನು ಗಮನಿಸಿ ಆಯ್ಕೆ ಮಾಡಲಾಗಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಎಸ್. ಯಶಸ್ವಿನಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಜೂನ್ 3ರಂದು ಸಂಜೆ 5ಕ್ಕೆ ನಗರದ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಘಟಿಕೋತ್ಸವ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ ನೀಡಲಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.