ADVERTISEMENT

ಹುಲಿ ದಿನಾಚರಣೆ: ಹುಲಿ ಯೋಜನಾ ನಿರ್ದೇಶನಾಲಯದಿಂದ 15 ಕಿ.ಮಿ. ಮ್ಯಾರಥಾನ್

​ಪ್ರಜಾವಾಣಿ ವಾರ್ತೆ
Published 29 ಜುಲೈ 2023, 6:37 IST
Last Updated 29 ಜುಲೈ 2023, 6:37 IST
ಹುಲಿ ಮರಿ
ಹುಲಿ ಮರಿ   

ಹುಣಸೂರು: ವಿಶ್ವ ಹುಲಿ ದಿನದ ಅಂಗವಾಗಿ ನಾಗರಹೊಳೆ ಹುಲಿ ಯೋಜನಾ ನಿರ್ದೇಶನಾಲಯದಿಂದ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಹುಲಿ ಯೋಜನಾ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹುಲಿ ಅರಣ್ಯ ಸಂರಕ್ಷಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಂಬಂಧ 15 ಕಿ.ಮಿ. ಮ್ಯಾರಥಾನ್ ಹಮ್ಮಿಕೊಳ್ಳಲಾಗಿದ್ದು, ಈ ಓಟವನ್ನು ಕಾಕನಕೋಟೆ ಸಫಾರಿ ಕೇಂದ್ರ ದಮ್ಮನಕಟ್ಟೆಯಲ್ಲಿ ಎಚ್.ಡಿ.ಕೋಟೆ ಶಾಸಕರಾದ ಅನಿಲ್ ಕುಮಾರ್ ಚಾಲನೆ ನೀಡಲಿದ್ದಾರೆ. ಬಿ.ವಿ.ರಂಗರಾವ್ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಹುಲಿ ಯೋಜನೆ, ಕಮಲ ಕರಿಕಾಳನ್ ಕೊಡಗು ಅರಣ್ಯ ಸಂರಕ್ಷಣಾಧಿಕಾರಿ, ಕುತಿಕಾ ಆಲನಹಳ್ಳಿ ಗೌರವ ವನ್ಯಜೀವಿ ಪರಿಪಾಲಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಫೋಟೋ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಛಾಯಾಗ್ರಾಹಕರು ಭಾಗವಹಿಸಿದ್ದಾರೆ. ಈಗಾಗಲೇ ತೀರ್ಪುಗಾರರು ಉತ್ತಮ ಛಾಯಾಚಿತ್ರ ಸೆರೆಹಿಡಿದವರ ಪಟ್ಟಿ ಅಂತಿಮಗೊಳಿಸಿದ್ದು, ಜು.29 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.