ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂಸವಾರಿಯಲ್ಲಿ ಚಾಮುಂಡೇಶ್ವರಿ ದೇವಿ ಮೂರ್ತಿ ಇರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತ ಆನೆಯೇ ಪ್ರಮುಖ ಆಕರ್ಷಣೆ. ಅಂಬಾರಿ ಆನೆ ಅಭಿಮನ್ಯುವಿಗೆ ಇನ್ನೂ ಎರಡು ಬಾರಿ ಅಂಬಾರಿ ಹೊರಿಸಬಹುದು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಪ್ರಕಾರ 60 ವರ್ಷವಾದರೆ ಆನೆಗಳ ಮೇಲೆ ಒತ್ತಡ ಹೇರುವಂತಿಲ್ಲ. ಹೀಗಾಗಿ, ಭವಿಷ್ಯದಲ್ಲಿ ಚಿನ್ನದ ಅಂಬಾರಿಯನ್ನು ಹೊರುವ ಆನೆಗೆ ಅರಣ್ಯ ಇಲಾಖೆಯು ಪ್ರತಿ ವರ್ಷವೂ ಹುಡುಕಾಟ ನಡೆಸುತ್ತದೆ. ಇದೀಗ ಅಭಿಮನ್ಯು ಸ್ಥಾನವನ್ನು ತುಂಬಬಲ್ಲ ಸಮರ್ಥ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಇಲಾಖೆಯ ಮುಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.