ಎಚ್.ಡಿ.ಕೋಟೆ: ವೆಸ್ಟ್ ನೈಲ್ ಜ್ವರದ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಕಟ್ಟೆಚ್ಚರವಹಿಸಿದ್ದು, ಕೇರಳ ರಾಜ್ಯಕ್ಕೆ ಹೊಂದಿಕೊಂಡಂತೆ ಇರುವ ತಾಲ್ಲೂಕಿನ ಡಿ.ಬಿ.ಕುಪ್ಪೆ ಸೇರಿದಂತೆ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಚೆಕ್ ಪೋಸ್ಟ್‌ಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.
‘ವೆಸ್ಟ್ ನೈಲ್ ಜ್ವರದ ಲಕ್ಷಣಗಳು ಕೇರಳದಲ್ಲಿ ಕಾಣಿಸಿಕೊಂಡಿರುವ ಪರಿಣಾಮ ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದ್ದಾರೆ.
ವೆಸ್ಟ್ ನೈಲ್ ಜ್ವರದ ಭೀತಿಯ ಹಿನ್ನೆಲೆ ಆಶಾ ಮತ್ತು ಆರೋಗ್ಯ ಕಾರ್ಯಕರ್ತರು ಗಡಿ ಭಾಗದಲ್ಲಿ ಜನರಿಗೆ ರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಗಡಿ ಭಾಗದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಜನಜಾಗೃತಿಗೆ ಮುಂದಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.