ADVERTISEMENT

ಮೈಸೂರು: ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಮನವಿ

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 4:09 IST
Last Updated 24 ಸೆಪ್ಟೆಂಬರ್ 2024, 4:09 IST
ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳನ್ನು ರದ್ದು ಪಡಿಸಿಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಸದಸ್ಯರು ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟಿಸಿದರು– ಪ್ರಜಾವಾಣಿ ವಾರ್ತೆ
ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳನ್ನು ರದ್ದು ಪಡಿಸಿಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಸದಸ್ಯರು ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟಿಸಿದರು– ಪ್ರಜಾವಾಣಿ ವಾರ್ತೆ   

ಮೈಸೂರು: ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ ಲೇಬರ್ ಕೋಡ್‌ಗಳನ್ನು ರದ್ದುಪಡಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಸದಸ್ಯರು ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಕೇಂದ್ರ ಸರ್ಕಾರವು ದುಡಿಯುವ ವರ್ಗಕ್ಕೆ ಮಾರಕವಾಗಿರುವ 4 ಕಾರ್ಮಿಕ ಸಂಹಿತೆಗಳನ್ನು 2019 ಹಾಗೂ 2022ರಲ್ಲಿ ಹಿಂಪಡೆದುಕೊಂಡಿದೆ. ಆದರೆ ಪ್ರಸ್ತುತ ವಿರೋಧ ಪಕ್ಷದ ಸದಸ್ಯರು ಹಾಜರಿಲ್ಲದ ಸಂದರ್ಭದಲ್ಲಿ ಯಾವುದೇ ಚರ್ಚೆ ನಡೆಸದೇ ಅವನ್ನು ಅನುಮೋದಿಸಲಾಗಿದೆ. ಆದ್ದರಿಂದ ಈ ಸಂಹಿತೆ ಜಾರಿಗೆ ತರಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನದಲ್ಲಿದ್ದು, ಅದನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ಎನ್.ಕೆ.ಬಾಲಾಜಿ ರಾವ್, ಎನ್.ಕೆ.ದೇವದಾಸ್, ಮುದ್ದುಕೃಷ್ಣ, ಜವರಯ್ಯ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.