ADVERTISEMENT

ಪಿರಿಯಾಪಟ್ಟಣ | ಮಲದ ಗುಂಡಿಗೆ ಇಳಿದು ಪೌರಕಾರ್ಮಿಕ ಸಾವು; ಇಬ್ಬರು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 12:10 IST
Last Updated 20 ಡಿಸೆಂಬರ್ 2021, 12:10 IST
ಮಲದ ಗುಂಡಿಗೆ ಇಳಿದು ಸ್ವಚ್ಛಗೊಳಿಸುತ್ತಿರುವುದು–ಪ್ರಾತಿನಿಧಿಕ ಚಿತ್ರ
ಮಲದ ಗುಂಡಿಗೆ ಇಳಿದು ಸ್ವಚ್ಛಗೊಳಿಸುತ್ತಿರುವುದು–ಪ್ರಾತಿನಿಧಿಕ ಚಿತ್ರ   

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಮಲದ ಗುಂಡಿಗೆ ಇಳಿದು ಸ್ವಚ್ಛಗೊಳಿಸುವ ವೇಳೆ ಮಧು (27) ಎಂಬ ಪೌರಕಾರ್ಮಿಕ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

‘ನಾಗರತ್ನ ಎಂಬುವವರ ಮನೆಯ ಒಳಚರಂಡಿ ಕಟ್ಟಿಕೊಂಡಿತ್ತು. ಇದನ್ನು ಸರಿಪಡಿಸಲು ಅವರು ಮೂವರು ಪೌರಕಾರ್ಮಿಕರಿಗೆ ತಿಳಿಸಿದ್ದರು. ಮಲದ ಗುಂಡಿಗೆ ಇಳಿದು ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಮಧು, ರಾಜೇಶ್ ಮತ್ತು ವಿಶ್ವ ಎಂಬ ಪೌರಕಾರ್ಮಿಕರು ಅಸ್ವಸ್ಥಗೊಂಡರು. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮಧು ಮೃತಪಟ್ಟಿದ್ದಾರೆ. ನಾಗರತ್ನ ವಿರುದ್ಧ ಸ್ಕ್ಯಾವೇಂಜರ್ ಕಾಯ್ದೆ 589 ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

ADVERTISEMENT

ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಮಧು ಅವರ ಮೃತದೇಹವನ್ನು ಜಿಲ್ಲಾಧಿಕಾರಿ ಕಚೇರಿ ಎದುರು ಇರಿಸಿ ಪೌರಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.

‘ರಾಜ್ಯದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಸರ್ಕಾರ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ’ ಎಂದು ಮುಖಂಡರಾದ ನಾರಾಯಣ ಕಿಡಿಕಾರಿದರು.

ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಮನವಿ ಸ್ವೀಕರಿಸಿ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.