ADVERTISEMENT

ಬಿಜೆಪಿಯಿಂದ ಸರ್ಕಾರ ಅಸ್ಥಿರಗೊಳಿಸುವ ಯತ್ನ: ಯತೀಂದ್ರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 8:28 IST
Last Updated 22 ಅಕ್ಟೋಬರ್ 2024, 8:28 IST
ಯತೀಂದ್ರ ಸಿದ್ದರಾಮಯ್ಯ
ಯತೀಂದ್ರ ಸಿದ್ದರಾಮಯ್ಯ   

ಮೈಸೂರು: 'ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ಹೆಚ್ಚಾಗಿದೆ. ಸುಳ್ಳು ಪ್ರಕರಣಗಳನ್ನು ದಾಖಲಿಸಿ, ತನಿಖಾ ಸಂಸ್ಥೆಗಳನ್ನು ಛೂ ಬಿಟ್ಟು ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ' ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ದೂರಿದರು.

ಮಂಗಳವಾರ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 501.81 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲೂ ಇಂದು ಸಿದ್ದರಾಮಯ್ಯ ಮೇಲೆ ತನಿಖೆಯ ನೆಪದಲ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಯುವ ಪ್ರಯತ್ನ ನಡೆದಿದೆ. ಇದು ಕೇವಲ ಸಿದ್ದರಾಮಯ್ಯ ಅವರ ಪ್ರಶ್ನೆಯಲ್ಲ. ಇಂದು ಕಾಂಗ್ರೆಸ್ ಗೆ ಆದದ್ದು,‌ ಮುಂದೆ ಎಲ್ಲ ವಿರೋಧ ಪಕ್ಷಗಳಿಗೂ ಆಗಬಹುದು. ಹೀಗೆಯೇ ಆದರೆ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಎಚ್ಚರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.