ವಿಜಯಪುರ: ‘2024ರ ಜನವರಿಯಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ ತಿಳಿಸಿದ್ದಾರೆ.
‘ವಿಜಯಪುರದಲ್ಲಿ ಎರಡು ದಿನ ನಡೆದ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ಐದು ಪ್ರಮುಖ ನಿರ್ಣಯಗಳನ್ನು ಈಡೇರಿಸುವಂತೆ ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ, ಮನವಿ ಸಲ್ಲಿಸಲಾಗುವುದು. ದಲಿತ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.