ADVERTISEMENT

ದೇವದುರ್ಗ | ಕೃಷ್ಣಾ ನದಿಗೆ ನೀರು: ಗ್ರಾಮಗಳಲ್ಲಿ ‍ಪ್ರವಾಹ ಭೀತಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 15:44 IST
Last Updated 21 ಜುಲೈ 2024, 15:44 IST
ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆ
ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆ   

ದೇವದುರ್ಗ: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.45 ಲಕ್ಷ ಕ್ಯೂಸೆಕ್‍ ನೀರು ಹರಿಸಲಾಗುತ್ತಿದೆ. ತಾಲ್ಲೂಕಿನ ಹೂವಿನಹೆಡಗಿ ಗ್ರಾಮದ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ.

ತಾಲ್ಲೂಕಿನ ಸುಮಾರು 40ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿ ನೀರು ನೋಡಲು ಜನರು ಕೃಷ್ಣಾ ನದಿ ಸೇತುವೆಗೆ ಬರುತ್ತಿದ್ದಾರೆ. ತಾಲ್ಲೂಕು ಆಡಳಿತ ಪೊಲೀಸರನ್ನು ನಿಯೋಜಿಸಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾಗಿದೆ.

ದಿನದಿಂದ ದಿನಕ್ಕೆ ಜಲಾಶಯದ ಒಳಹರಿವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ. 2.40 ಲಕ್ಷ ಕ್ಯುಸೆಕ್ ನೀರು ಹರಿಸಿದಲ್ಲಿ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಲಿದೆ. ತಾಲ್ಲೂಕಿನ ಸುಮಾರು 40ಕ್ಕೂ ಹೆಚ್ಚಿನ ಹಳ್ಳಿಗಳು ಪ್ರವಾಹಕ್ಕೆ ಸಿಲುಕಲಿವೆ. ಪ್ರಸ್ತುತ 1.45 ಲಕ್ಷ ಕ್ಯೂಸೆಕ್ ನೀರು ಮಾತ್ರ ಬಿಟ್ಟಿರುವುದರಿಂದ ಕೆಲ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹ ಎದುರಾಗಿದೆ. ಪ್ರವಾಹ ಸಂಭವಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಚನ್ನಮಲ್ಲಪ್ಪ ತಿಳಿಸಿದ್ದಾರೆ.

ADVERTISEMENT
ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿರುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.