ರಾಯಚೂರು: ರಾಯಚೂರು ಲೋಕಸಭಾ (ಪರಿಶಿಷ್ಟ ಪಂಗಡದ ಮೀಸಲು) ಕ್ಷೇತ್ರಕ್ಕೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ 10 ಅಭ್ಯರ್ಥಿಗಳ ಪೈಕಿ ಸೋಮವಾರ ಇಬ್ಬರು ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.
ಕೆ.ದೇವಣ್ಣ ನಾಯಕ, ನರಸಿಂಹ ನಾಯಕ ಕರಡಿಗುಡ್ಡ ಅವರು ಸೋಮವಾರ ನಾಮಪತ್ರವನ್ನು ಮರಳಿ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಬಿಜೆಪಿಯ ರಾಜಾ ಅಮರೇಶ್ವರ ನಾಯಕ, ಕಾಂಗ್ರೆಸ್‌ನ ಜಿ.ಕುಮಾರ ನಾಯಕ, ಬಿಎಸ್‌ಪಿಯ ಎಸ್.ನರಸಣ್ಣ ಗೌಡ ನಾಯಕ, ಕರ್ನಾಟಕ ರಾಷ್ಟ್ರ ಸಮಿತಿಯ ಬಸವಪ್ರಭು ಮೇದಾ, ಸೋಷಿಯಲ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ರಾಮಲಿಂಗಪ್ಪ, ಭಾರತೀಯ ಜನ ಸಾಮ್ರಾಟ ಪಕ್ಷದ ಮೇದಾರ ಶಾಮರಾವ್, ಪಕ್ಷೇತರ ಅಭ್ಯರ್ಥಿಗಳಾದ ಅಮರೇಶ ಹಾಗೂ ಯಲ್ಲಮ್ಮ ದಳಪತಿ ಅಂತಿಮ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಏ.22 ಕೊನೆಯ ದಿನವಾಗಿತ್ತು. ಇನ್ನು ಪ್ರಚಾರ ಬಿರುಸು ಪಡೆಯಲಿದೆ. ಮೇ 7 ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.