ADVERTISEMENT

ರಾಯಚೂರು | ಕೋವಿಡ್‌ ಮುನ್ನೆಚ್ಚರಿಕೆ ಲಸಿಕೆ ಲಭ್ಯ: ಡಾ.ಸುರೇಂದ್ರ ಬಾಬು

​ಪ್ರಜಾವಾಣಿ ವಾರ್ತೆ
Published 5 ಜನವರಿ 2024, 15:44 IST
Last Updated 5 ಜನವರಿ 2024, 15:44 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ರಾಯಚೂರು: ‘ಜಿಲ್ಲೆಯಲ್ಲೂ ಕೋವಿಡ್‌ ಪ್ರಕರಣಗಳು ವರದಿಯಾಗಿತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ತಿಳಿಸಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳ ಐ.ಸಿ.ಯು ಉಪಕರಣ ಮತ್ತು ಆಕ್ಸಿಜನ್ ಸಿಲಿಂಡರ್ ಪಿ.ಎಸ್.ಎ ಆಕ್ಸಿಜನ್ ಪ್ಲಾಂಟ್ ಸುಸ್ಥಿತಿಯಲ್ಲಿ ಇಡಲಾಗಿದೆ. ಜೆ.ಎನ್ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಪರೀಕ್ಷೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ರಾಜ್ಯದಲ್ಲಿ ಒಟ್ಟು 30 ಸಾವಿರ ಡೋಸ್ ವ್ಯಾಕ್ಸಿನ್ ಹಾಗೂ ರಾಯಚೂರು ಜಿಲ್ಲೆಯಲ್ಲಿ ಒಟ್ಟು 820 ಡೋಸ್ ಕೋವಿಡ್ ಮುನ್ನಚ್ಚರಿಕೆ ಡೋಸ್ ವ್ಯಾಕ್ಸಿನ್‌ ಲಭ್ಯವಿದೆ. ಸಾರ್ವಜನಿಕರು ಲಸಿಕೆ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.