ADVERTISEMENT

ರಾಯಚೂರು: ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 15:56 IST
Last Updated 9 ಜುಲೈ 2024, 15:56 IST
ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಕಾರ್ಯಕರ್ತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು
ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಕಾರ್ಯಕರ್ತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು   

ರಾಯಚೂರು: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆ ಕಟ್ಟಡಗಳನ್ನು ತಕ್ಷಣ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ಲಿಂಗಸುಗೂರು ತಾಲ್ಲೂಕಿನ ಅನ್ವರಿ ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ವಿದ್ಯಾರ್ಥಿ ತಲೆಗೆ ಪೆಟ್ಟಾಗಿದೆ. ರಾಯಚೂರಿನ ಅರಸಿಗೇರ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು ಮಕ್ಕಳು ಗಾಯಗೊಂಡಿದ್ದರು. ದೇವದುರ್ಗದ ಸರ್ಕಾರಿ ಬಾಲಕಿಯರ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು ವಿದ್ಯಾರ್ಥಿನಿಯ ಕಾಲಿಗೆ ತೀವ್ರ ಪೆಟ್ಟಾಗಿರುವುದು ಎಲ್ಲರಿಗೂ ಗೊತ್ತಿದೆ. ಆದರೆ, ಶಿಕ್ಷಣ ಇಲಾಖೆ ಕಟ್ಟಡಗಳ ದುರಸ್ತಿಗೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಶಾಲಾ ಕಟ್ಟಡಗಳ ಚಾವಣಿ ಕುಸಿದು ಬೀಳುತ್ತಿರುವುದು ನಿರಂತರವಾಗಿ ಮುಂದುವರಿದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಶಾಲಾ ಶಿಕ್ಷಣ ಇಲಾಖೆ ಎಚ್ಚೆತ್ತುಕೊಳ್ಳಬೇಕು. ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಶಿಥಿಲ ಶಾಲಾ ಕಟ್ಟಡಗಳ ಪಟ್ಟಿ ತಯಾರಿಸಬೇಕು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಎಐಡಿಎಸ್ಒ ರಾಯಚೂರು ಜಿಲ್ಲಾ ಕಾರ್ಯದರ್ಶಿ ಬಸವರಾಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿಪತ್ರ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.