ರಾಯಚೂರು: ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ನಿಮಿತ್ತ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಲಾಯಿತು.
ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮಿ ಅವರ ಸಾನಿಧ್ಯದಲ್ಲಿ ಪೂಜೆ ಸಲ್ಲಿಸಲಾಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಹಾದಿಮನಿ ವೀರಲಕ್ಷ್ಮೀ, ನಗರಸಭೆ ಅಧ್ಯಕ್ಷ ಈ.ವಿನಯ್ ಕುಮಾರ್, ಬಿಜೆಪಿ ಮುಖಂಡ ಎನ್.ಶಂಕ್ರಪ್ಪ, ತಹಶೀಲ್ದಾರ್ ಡಾ.ಹಂಪಣ್ಣ, ನಗರಸಭೆ ಪ್ರಭಾರಿ ಪೌರಾಯುಕ್ತ ಎಚ್.ವೆಂಕಟೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ, ನಗರಸಭೆ ಸದಸ್ಯ ಜಿಂದಪ್ಪ, ಈ.ಶಶಿರಾಜ, ಶರಣಬಸವ ಬಲ್ಲಟಿಗಿ, ಕಡಗೋಳ ಆಂಜನೇಯ, ಕಡಗೋಳ ಶರಣಪ್ಪ, ಬಾಬುರಾವ್, ಕಡಗೋಳ ರಾಮಚಂದ್ರ, ಬಂಡೇಶ ವಲ್ಕಂದಿನ್ನಿ, ಮುಕ್ತಿಯಾರ್, ರವೀಂದ್ರ ಜಲ್ದಾರ, ತ್ರಿವಿಕ್ರಮ ಜೋಷಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.