ADVERTISEMENT

ರಾಯಚೂರು | ಮತಾಂತರ ನಿಷೇಧ ಕಾಯ್ದೆ ರದ್ದು ಸಲ್ಲ: ವಿಹಿಂಪ

​ಪ್ರಜಾವಾಣಿ ವಾರ್ತೆ
Published 20 ಜೂನ್ 2023, 5:31 IST
Last Updated 20 ಜೂನ್ 2023, 5:31 IST
ರಾಯಚೂರಿನಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ರಾಯಚೂರು: ಈಚೆಗೆ ರಾಜ್ಯ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಸರ್ಕಾರ ಈ ಹಿಂದೆ ಜಾರಿಯಲ್ಲಿದ್ದ ಮತಾಂತರ ನಿಷೇಧ ಕಾನೂನು ಹಿಂಪಡೆಯಲು ತೀರ್ಮಾನಿಸಿದ್ದನ್ನು ಖಂಡಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್  ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಭಾರತದಲ್ಲಿ ಹಿಂದೂಗಳ ಜತೆಗೆ ಅನೇಕ ಅನ್ಯಧರ್ಮಿಯರು ವಾಸವಾಗಿದ್ದು ತಮ್ಮ ಆಚರಣೆ ಮಾಡುತ್ತಿದ್ದಾರೆ. ಆದರೆ ಹಿಂದುಗಳಿಗೆ ಆಮಿಷ ತೋರಿಸಿ, ಬಲವಂತವಾಗಿ ಬೇರೆ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದ್ದು ಖಂಡನೀಯ. ಹಿಂದೂಗಳನ್ನು ಮತಾಂತರದಿಂದ ರಕ್ಷಿಸಿ ನಮ್ಮ ಧರ್ಮ ಕಾಪಾಡುವುದು ಪ್ರತಿಯೊಬ್ಬ ಹಿಂದುಗಳ ಕರ್ತವ್ಯವಾಗಿದೆ ಎಂದರು.

ಕಾಂಗ್ರೆಸ್‌ಗೆ ಅನ್ಯ ಧರ್ಮಿಯರ ಜತೆಗೆ ಹಿಂದೂಗಳು ಮತ ಹಾಕಿದ್ದರಿಂದಲೇ ಸರ್ಕಾರ ರಚನೆಯಾಗಿದ್ದು ಕೇವಲ ಅಲ್ಪಸಂಖ್ಯಾತ ಮತಗಳಿಂದಲ್ಲ. ಕೂಡಲೇ ಮಂತ್ರಿ ಮಂಡಲದಲ್ಲಿ ಕೈಗೊಂಡಿರುವ ತೀರ್ಮಾನ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಮಾನಂದ ಯಾದವ, ಎಸ್.ಎಂ.ಪಾಟೀಲ, ರಾಜೇಶ್ವರಿ ಗೋಪಿ ಶೆಟ್ಟಿ, ಬಜರಂಗದಳದ ನಗರ ಸಂಚಾಲಕ ಶರಣಬಸವ, ಜಿಲ್ಲಾ ಸಂಯೋಜಕ ಮಲ್ಲಿಕಾರ್ಜುನ ಎಚ್.ಕೆ, ವಿಎಚ್‌ಪಿ ಸಹ ಕಾರ್ಯದರ್ಶಿ ವಿಜಯಕುಮಾರ ಹೂಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.