ADVERTISEMENT

ಆಗಸ್ಟ್ 15ರಂದು ಸಾಮ್ರಾಜ್ಯಶಾಹಿ ವಿರೋಧಿ ದಿನಾಚರಣೆ: ಬಿ.ರುದ್ರಯ್ಯ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 13:55 IST
Last Updated 30 ಜೂನ್ 2024, 13:55 IST

ರಾಯಚೂರು: ‘ರೈತ, ಕಾರ್ಮಿಕ, ದಲಿತ ವಿರೋಧಿ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದನ್ನು ವಿರೋಧಿಸಿ ಆಗಸ್ಟ್ 15ರಂದು ‘ಸಾಮ್ರಾಜ್ಯಶಾಹಿ ವಿರೋಧಿ ದಿನ’ ಆಚರಿಸಿ ಪ್ರತಿಭಟನೆ ಮಾಡಲಾಗುವುದು’ ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಬಿ.ರುದ್ರಯ್ಯ ತಿಳಿಸಿದರು. 

‘ದೇಶದ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡಿ 10 ವರ್ಷ ಆಡಳಿತ ನಡೆಸಿದ್ದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಏರಿದ್ದು ದುರಾದೃಷ್ಠ ಸಂಗತಿ. ಸ್ವತಂತ್ರ, ಸಾರ್ವಭೌಮ ರಾಷ್ಟ್ರವಾದ ಭಾರತ ಈಗ ಅಮೆರಿಕ ನೇತೃತ್ವದ ಸಾಮ್ರಾಜ್ಯ ಶಾಹಿ ಶಕ್ತಿಗಳ ಕೈವಾಡಕ್ಕೆ ಸಿಲುಕಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.

ಸಾಮ್ರಾಜ್ಯಶಾಹಿ ಮುಕ್ತ, ಖಾಸಗೀಕರಣ, ಉದಾರೀಕರಣ, ಜಾಗತೀಕರಣ ಮುಕ್ತ ಭಾರತಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಇದರ ಭಾಗವಾಗಿ ದೇಶದಾದ್ಯಂತ ಆಗಸ್ಟ್ 15ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಾಮ್ರಾಜ್ಯಶಾಹಿ ದಿನಾಚರಣೆ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.

ADVERTISEMENT

ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ, ಜಿ.ಅಮರೇಶ, ಜಿಲ್ಲಾ ಸಮಿತಿ ಸದಸ್ಯ ಅಜೀಜ್ ಜಾಗೀರದಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.