ರಾಯಚೂರು: ತೋಟಗಾರಿಕೆ ಇಲಾಖೆಯಿಂದ ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ತೋಟಗಾರಿಕ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ಕೊಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಅಥವಾ ಇಲಾಖೆಯ ವೆಬ್‍ಸೈಟ್: https://horticulturedir.karnataka.gov.in ಮೂಲಕ ಅರ್ಜಿ ಪಡೆಯಬಹುದು. ಸಾಮಾನ್ಯ ಅಭ್ಯರ್ಥಿ-16 ( ಮಹಿಳೆ-8), ಪರಿಶಿಷ್ಟ ಜಾತಿ-3, ಪರಿಶಿಷ್ಟ ಪಂಗಡ-1 ಸೇರಿ ಒಟ್ಟು 20 ಅಭ್ಯರ್ಥಿಗಳಿಗೆ ಅವಕಾಶ ಇದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ, ಇತರರಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ವಿಷಯದೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಸ್ವಂತ ಸಾಗುವಳಿ ಮಾಡುತ್ತಿರಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕಚೇರಿಗೆ ಸಲ್ಲಿಸಲು ಏ.1 ಕೊನೆಯ ದಿನಾಂಕವಾಗಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕ ಮಹಮ್ಮದ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.