ADVERTISEMENT

ರಾಯಚೂರು | ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 14:37 IST
Last Updated 18 ಜೂನ್ 2024, 14:37 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ರಾಯಚೂರು: ದೇವದುರ್ಗ ತಾಲ್ಲೂಕು ಗಬ್ಬೂರಿನ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ವಿಷಯಗಳ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ವಿಷಯ–1, ಇಂಗ್ಲಿಷ್ –1, ಉರ್ದು ಅಥವಾ ಹಿಂದಿ–1, ಗಣಿತ–1, ಸಾಮಾನ್ಯ ವಿಜ್ಞಾನ–1, ಸಮಾಜ ವಿಜ್ಞಾನ–1 ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಜೂನ್ 24ರೊಳಗಾಗಿ ಅಗತ್ಯ ದಾಖಲಾತಿಗಳು ಹಾಗೂ ಸ್ವವಿವರದೊಂದಿಗೆ ಶಾಲೆಯ ಮುಖ್ಯಗುರುಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 9945121187 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ADVERTISEMENT

ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಾತಿಯ ದಿನಾಂಕ ವಿಸ್ತರಣೆ

ರಾಯಚೂರು: ದೇವದುರ್ಗದ ಪಾಲಿಟೆಕ್ನಿಕ್‌ನಲ್ಲಿ 2024-25ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಾತಿ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಗಳಿದ್ದು, ಆಸಕ್ತರು ಜೂನ್ 29ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ: 9448842465 ಸಂಪರ್ಕಿಸಲು ಕಾಲೇಜಿನ ಪ್ರಾಂಶುಪಾಲ ಟಿ.ಶಿವಕುಮಾರ ತಿಳಿಸಿದ್ದಾರೆ.

ಸಾರ್ವಜನಿಕರ ಕುಂದುಕೊರತೆ ಸಭೆ ನಾಳೆ

ರಾಯಚೂರು: ಜಿಲ್ಲಾ ಲೋಕಾಯುಕ್ತ ಪೊಲೀಸರ ವತಿಯಿಂದ ಜೂನ್ 20ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಿಂಧನೂರಿನ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ಏರ್ಪಡಿಸಲಾಗಿದೆ.

ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎನ್.ಶಶಿಧರ ತಿಳಿಸಿದ್ದಾರೆ.

ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಯಚೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ/ನಂತರ ವಸತಿ ನಿಲಯಗಳಿಗೆ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ನಿಲಯಗಳಿಗೆ ಮೆಟ್ರಿಕ್ ಪೂರ್ವ/ನಂತರ ವಸತಿ ನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿವರಗಳಿಗೆ ರಾಯಚೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.