ADVERTISEMENT

ರಾಯಚೂರು | ಮಸೀದಿಗೆ ಮದ್ಯದ ಬಾಟಲಿ ಎಸೆತ: 7 ಜನರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 0:21 IST
Last Updated 1 ಆಗಸ್ಟ್ 2024, 0:21 IST
ಸಿರವಾರದಲ್ಲಿ ಮಂಗಳವಾರ ಮಸೀದಿಗೆ ಬಾಟಲಿ ಎಸೆದ ಸ್ಥಳಕ್ಕೆ ಸಿಪಿಐ ಎಂ.ಶಶಿಕಾಂತ ಭೇಟಿ ನೀಡಿ ಪರಿಶೀಲಿಸಿದರು
ಸಿರವಾರದಲ್ಲಿ ಮಂಗಳವಾರ ಮಸೀದಿಗೆ ಬಾಟಲಿ ಎಸೆದ ಸ್ಥಳಕ್ಕೆ ಸಿಪಿಐ ಎಂ.ಶಶಿಕಾಂತ ಭೇಟಿ ನೀಡಿ ಪರಿಶೀಲಿಸಿದರು   

ಸಿರವಾರ (ರಾಯಚೂರು ಜಿಲ್ಲೆ): ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಮಸೀದಿಗೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಮದ್ಯದ ಬಾಟಲಿ ಎಸೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕ ಸೇರಿ ಏಳು ಮಂದಿಯನ್ನು ಬಂಧಿಸಲಾಗಿದೆ.

ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ರಾಯಚೂರಿನ ಬಾಲಮಂದಿರದಲ್ಲಿ ಇರಿಸಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕುಡಿದ ಅಮಲಿನಲ್ಲಿ ಕೃತ್ಯ ಎಸೆಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಸೀದಿಗೆ ಬಾಟಲಿ ಎಸೆದಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿದ ಮುಸ್ಲಿಂ ಯುವಕರು, ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಎಎಸ್ಪಿ ಶಿವಕುಮಾರ, ಡಿವೈಎಸ್ಪಿ ಬಿ.ಎಸ್.ತಳವಾರ, ಸಿಪಿಐ ಶಶಿಕಾಂತ, ಪಿಎಸ್ಐ ಗುರುಚಂದ್ರ ಯಾದವ್ ಭೇಟಿ ನೀಡಿ ಪರಿಶೀಲಿಸಿದರು. ಸಿರವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿರವಾರದ ಮಸೀದಿಗೆ ಬಾಟಲಿ ಎಸೆದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮುಸ್ಲಿಂ ಯುವಕರು ರಸ್ತೆ ತಡೆ ನಡೆಸಿದರು
ಸಿರವಾರದ ಮಸೀದಿಗೆ ಬಾಟಲಿ ಎಸೆದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಮುಸ್ಲಿಂ ಯುವಕರು ರಸ್ತೆ ತಡೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.