ADVERTISEMENT

ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 14:19 IST
Last Updated 18 ಜನವರಿ 2021, 14:19 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಸೋಮವಾರ ಟಿಪ್ಪುಸುಲ್ತಾನ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಸೋಮವಾರ ಟಿಪ್ಪುಸುಲ್ತಾನ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.   

ರಾಯಚೂರು: ಈಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದ ಟಿಪ್ಪುಸುಲ್ತಾನ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಆನಂತರ ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ, ವಿವಿಧ ತರಬೇತಿ ಹಾಗೂ ಚುನಾವಣೆಯ ದಿನದಂದು ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್ ಸೇರಿದಂತೆ ವಿವಿಧ ಕೆಲಸ ಮಾಡಿದ ಆಶಾ ಕಾರ್ಯಕರ್ತೆಯರಿಗೆ ಇದುವರೆಗೂ ಯಾವುದೇ ರೀತಿಯ ಗೌರವಧನ ನೀಡಿಲ್ಲ ಎಂದು ಹೇಳಿದರು.

ಚುನಾವಣೆ ಕಾರ್ಯದ ವೇಳೆ ಹಲವೆಡೆ ಮದ್ಯಾಹ್ನದ ಊಟ ನಿಡಿಲ್ಲ, ಪ್ರತಿಯೊಬ್ಬ ಆಶಾ ಕಾರ್ಯಕರ್ತೆಗೆ ಒಂದು ದಿನಕ್ಕೆ ₹700 ನೀಡಬೇಕೆಂಬ ಆದೇಶ ಇದ್ದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ಉಡಾಫೆಯ ಉತ್ತರ ಹೇಳುತ್ತಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಸಲ್ಲಬೇಕಾದ ಗೌರವಧನ ಕೂಡಲೇ ಒದಗಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘದ ಜಿಲ್ಲಾಧ್ಯಕ್ಷ ವಿರೇಶ ಎನ್.ಎಸ್, ತಾಲ್ಲೂಕು ಗೌರವಾಧ್ಯಕ್ಷ ಮಹೇಶ ಚೀಕಲಪರ್ವಿ, ಈರಮ್ಮ, ಲಕ್ಷ್ಮೀ ಆಶಾ ಕಾರ್ಯಕರ್ತೆಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.