ADVERTISEMENT

ವಕ್ಫ್ ಮಂಡಳಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2024, 9:19 IST
Last Updated 22 ನವೆಂಬರ್ 2024, 9:19 IST
<div class="paragraphs"><p>ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬಿಜೆಪಿ ಕಾರ್ಯಕರ್ತರು 'ನಮ್ಮ ಭೂಮಿ, ನಮ್ಮ ಹಕ್ಕು' ಎಂಬ ಘೋಷ ವಾಕ್ಯದ ಅಡಿಯಲ್ಲಿ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.</p></div>

ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬಿಜೆಪಿ ಕಾರ್ಯಕರ್ತರು 'ನಮ್ಮ ಭೂಮಿ, ನಮ್ಮ ಹಕ್ಕು' ಎಂಬ ಘೋಷ ವಾಕ್ಯದ ಅಡಿಯಲ್ಲಿ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

   

ರಾಯಚೂರು: ರಾಜ್ಯದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ ಜಾಮೀನು ದೇಗುಲಗಳ ಆಸ್ತಿ ಕಬಳಿಕೆ ಮಾಡುವ ಹುನ್ನಾರ ರಾಜ್ಯ ಸರ್ಕಾರ ಮಾಡುತ್ತಿದೆ. ವಕ್ಫ್ ಮಂಡಳಿಯಿಂದ ಆದ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಾಂತಿ, ಸಾಮರಸ್ಯದ ನಾಡಾಗಿದ್ದ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯವನ್ನು ಆತಂಕದ ಸ್ಥಿತಿಗೆ ತಳ್ಳುತ್ತಿದೆ. ರೈತರ, ಮಠ ಮಂದಿರದ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ದಾಖಲೆಗಳಲ್ಲಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ವಕ್ಫ್ ಕಾಯ್ದೆಯನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಲು ಮುಂದಾಗಿದ್ದೇ ತಡ ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದ ಆಸ್ತಿಯನ್ನು ಕಬಳಿಸಲು ಹುನ್ನಾರ ನಡೆಸಿದೆ.

ಪ್ರತಿಭಟನಾನಿರತ ವಿಧಾನಪರಿಷತ್ ಮಾಜಿ ಸದಸ್ಯ ಎನ್. ಶಂಕ್ರಪ್ಪ ಮಾತನಾಡಿ, ಸಚಿವ ಜಮೀರ್ ಅಹ್ಮದ್ ರಾಜ್ಯದ ಹಲವೆಡೆ ಭೇಟಿ ನೀಡಿ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡುತ್ತಿದ್ದಾರೆ. ಸರ್ಕಾರ ರೈತರ ಆಸ್ತಿಯನ್ನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಸಮುದಾಯವನ್ನು ಓಲೈಕೆ ಮಾಡಲು ಓಟ್ ಬ್ಯಾಂಕ್ ರಾಜಕಾರಣಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ದೂರಿದರು.

ವಕ್ಫ್ ಬೋರ್ಡ್‌ನಿಂದ ಆಗುತ್ತಿರುವ ಗೊಂದಲ ಸರಿಪಡಿಸಲು ರಾಜ್ಯ ಸರ್ಕಾರ ಮುಂದಾಗದೇ ಅಧಿಕಾರಿಗಳ ಸಭೆ ನಡೆಸಿ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡದಂತೆ ತಾತ್ಕಾಲಿಕ ತಡೆ ನೀಡಿದ್ದಾರೆ. ಇದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ ಇದು ಮುಂದೊಂದು‌ ದಿನ ರೈತರಿಗೆ‌ ಮರಣ ಶಾಸನವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರಾಜಕುಮಾರ, ಶಿವಬಸ್ಸಪ್ಪ ಮಾಲಿ ಪಾಟೀಲ, ಸುಮಾ ಅಶೋಕ ಗಸ್ತಿ, ಡಾ.ನಾಗರಾಜ ಬಾಲ್ಕಿ ಉಪಸ್ಥಿತರಿದ್ದರು.

ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬಿಜೆಪಿ ಕಾರ್ಯಕರ್ತರು 'ನಮ್ಮ ಭೂಮಿ, ನಮ್ಮ ಹಕ್ಕು' ಎಂಬ ಘೋಷ ವಾಕ್ಯದ ಅಡಿಯಲ್ಲಿ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.