ADVERTISEMENT

ಮಾನ್ವಿ | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 14:23 IST
Last Updated 18 ಜೂನ್ 2024, 14:23 IST
ಮಾನ್ವಿಯಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದರು
ಮಾನ್ವಿಯಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದರು   

ಮಾನ್ವಿ: ತೈಲ ದರ ಹೆಚ್ಚಳ ಸೇರಿದಂತೆ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಪಕ್ಷದ ನೂರಾರು ಕಾರ್ಯಕರ್ತರು ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಮಂಡಲ ಅಧ್ಯಕ್ಷ ಜೆ.ಸುಧಾಕರ ಮಾತನಾಡಿ, ‘ರಾಜ್ಯ ಸರ್ಕಾರ ದಿಢೀರನೆ ಪೆಟ್ರೋಲ್ ಹಾಗೂ ಡೀಸೆಲ್‌ ದರ ಹೆಚ್ಚಳ ಮಾಡಿರುವುದು ಖಂಡನೀಯ. ಜಿಲ್ಲೆಯಲ್ಲಿ ರೈತರಿಗೆ ಬರ ಪರಿಹಾರದ ಹಣವನ್ನು ಸಮರ್ಪಕವಾಗಿ ವಿತರಿಸದೆ ಅನ್ಯಾಯ ಮಾಡಿದೆ. ಭ್ರಷ್ಟಾಚಾರದ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದೆ’ ಎಂದು ದೂರಿದರು.

ADVERTISEMENT

ಪಕ್ಷದ ಮುಖಂಡರಾದ ಜಗದೀಶ್ ಓತೂರು, ಶರಣಪ್ಪಗೌಡ ನಕ್ಕುಂದಿ, ಉಮೇಶ ಸಜ್ಜನ್, ರುದ್ರಗೌಡ ಮದ್ಲಾಪುರ, ನರಸಿಂಹನಾಯಕ ಕರಡಿಗುಡ್ಡ, ಮಲ್ಲಿಕಾರ್ಜುನಗೌಡ ಸಂಗಾಪುರ, ಅಯ್ಯಪ್ಪ ನಾಯಕ ಮ್ಯಾಕಲ್, ಶ್ರೀನಿವಾಸ, ಕುಮಾರಸ್ವಾಮಿ ಮೇದಾ, ಕೆ.ಎಂ. ಶಿವಲಿಂಗಯ್ಯ ಸ್ವಾಮಿ, ಸುರೇಶ ಜೋತಾನ್, ಮಹಾಂತೇಶ ಗೌಡ, ಅಮರಗುಂಡಪ್ಪ, ಶಿವಕುಮಾರ, ಗುರುಸಿದ್ದಪ್ಪ ಕಣ್ಣೂರು, ವಿರೂಪಾಕ್ಷಿ ನುಗಡೋಣಿ ಭಾಗವಹಿಸಿದ್ದರು.

ಮಾನ್ವಿಯಲ್ಲಿ ಮಂಗಳವಾರ ಬಿಜೆಪಿ ಪಕ್ಷದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.